May 2024

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ… ಬೌರಿಂಗ್ ಆಸ್ಪತ್ರೆ ಬಳಿ ರೇವಣ್ಣ ಆಕ್ರೋಶ

ಸಮಗ್ರ ನ್ಯೂಸ್: ಇಂದು ಎಚ್.ಡಿ ರೇವಣ್ಣ ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ. ಇದೆ ಸಂದರ್ಭದಲ್ಲಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಎಚ್.ಡಿ ರೇವಣ್ಣ ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ […]

ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ಮಾಡುತ್ತಿದ್ದಾರೆ… ಬೌರಿಂಗ್ ಆಸ್ಪತ್ರೆ ಬಳಿ ರೇವಣ್ಣ ಆಕ್ರೋಶ Read More »

ಹಾಸನ ಅಶ್ಲೀಲ ವಿಡಿಯೋ ಪ್ರಕರಣ| ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಫುಲ್ ಟೆನ್ಷನ್

ಸಮಗ್ರ ನ್ಯೂಸ್: ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಇವತ್ತು ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಎಸ್‌ಐಟಿ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳಿಗೂ ನೋಟಿಸ್ ಜಾರಿ ಮಾಡಿದ್ದಾರೆ. ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಈಗ ಟೆನ್ಷನ್ ಎದುರಾಗಿದೆ. ಪ್ರಜ್ವಲ್ ರೇವಣ್ಣ ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸಂಕಷ್ಟ ಶುರುವಾಗಿದೆ. ವಿಡಿಯೋದಲ್ಲಿರುವ ಓರ್ವ ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ ಹಾಗೂ ಬೆಂಗಳೂರಿನ ಎಇಇ, ಸೇರಿ 5ಕ್ಕೂ ಹೆಚ್ಚು ಅಧಿಕಾರಿಗಳಿಗೆ

ಹಾಸನ ಅಶ್ಲೀಲ ವಿಡಿಯೋ ಪ್ರಕರಣ| ವೈರಲ್ ವಿಡಿಯೋದಲ್ಲಿರುವ ಮಹಿಳಾ ಅಧಿಕಾರಿಗಳಿಗೆ ಫುಲ್ ಟೆನ್ಷನ್ Read More »

ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ನಿಮಿತ್ತ ರಾಯಚೂರು ನಗರದ ತಿಮ್ಮಾಪುರ ಪೇಟೆ ಬಡಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ರವರು ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ, ವಿದ್ಯಾವಂತರನ್ನು ಲೋಕಸಭೆಗೆ ಆರಿಸಿ ಕಳುಹಿಸುವ ಜವಾಬ್ದಾರಿ ಜನರ ಮೇಲಿದೆ, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕಾಗಿದೆ ಎಂದು ಮನವಿ ಮಾಡಿದರು.

ರಾಯಚೂರು ಕಾಂಗ್ರೆಸ್ ಅಭ್ಯರ್ಥಿ ಜಿ ಕುಮಾರ ನಾಯಕ್ ಪರವಾಗಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಪ್ರಚಾರ Read More »

ನಂಜನಗೂಡು : ಬಿರುಗಾಳಿ ಮಳೆಗೆ ಮುರಿದು ಬಿದ್ದ ನಾಲ್ಕು ಎಕರೆ ಬಾಳೆ

ಸಮಗ್ರ ನ್ಯೂಸ್ : ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತರಾದ ಬಸವರಾಜಪ್ಪ ಎಂಬುವರಿಗೆ ಸೇರಿದ ಬಾಳೆ ಬೆಳೆ ಇದಾಗಿದ್ದು, ತಮ್ಮ ನಾಲ್ಕು ಎಕರೆ ಪ್ರದೇಶದಲ್ಲಿ ಸಾಲ ಸೋಲ ಮಾಡಿ ಬಾಳೆ ಬೆಳೆ ಬೆಳೆದಿದ್ದರು. ಹಗಲು ರಾತ್ರಿ ಎನ್ನದೆ ಕಾಡುಪ್ರಾಣಿಗಳ ಹಾವಳಿಯ ನಡುವೆಯೂ ಕೂಡ ಬೆಳೆಯನ್ನು ರಕ್ಷಣೆ ಮಾಡಿಕೊಂಡಿದ್ದರು. ಆದರೆ ಬಿರುಗಾಳಿ ಸಹಿತ ಸುರಿದ ಮಳೆಗೆ

ನಂಜನಗೂಡು : ಬಿರುಗಾಳಿ ಮಳೆಗೆ ಮುರಿದು ಬಿದ್ದ ನಾಲ್ಕು ಎಕರೆ ಬಾಳೆ Read More »

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ

ಸಮಗ್ರ ನ್ಯೂಸ್‌ : ಇತಿಹಾಸ ಪ್ರಸಿದ್ಧ ಕಾಪು ಶ್ರೀ ಬ್ರಹ್ಮ ಮುಗ್ಗೇರ್ಕಳ ಪಿಲಿಚಂಡಿ ದೈವಸ್ಥಾನದಲ್ಲಿ ದ್ವೈ ವಾರ್ಷಿಕವಾಗಿ ನಡೆಯುವ ಪಿಲಿ ಕೋಲವು ವಿಶೇಷ ಜನಾಕರ್ಷಣೆಯೊಂದಿಗೆ ಸಂಪನ್ನಗೊಂಡಿತು. ಎರಡು ತಾಸಿನ ಬಣ್ಣಗಾರಿಕೆಯ ಬಳಿಕ ಅಬ್ಬರದೊಂದಿಗೆ ಪಂಜರದೊಳಗಿಂದ ಹೊರಗೆ ಬಂದ ಪಿಲಿಚಂಡಿ ದೈವವು ಬ್ರಹ್ಮರ ಗುಂಡಕ್ಕೆ ಮೂರು ಸುತ್ತು ಬಂದು, ಮಾರಿಯಮ್ಮ ಗುಡಿಯ ಮುಂಭಾಗದಲ್ಲಿ ನೆಡಲಾಗಿದ್ದ ಬಂಟ ಕಂಬವನ್ನೇರಿ ಜೀವಂತ ಕೋಳಿಯನ್ನು ಬಲಿಯಾಗಿ ಸ್ವೀಕರಿಸಿ ಮುಂದೆ ಗ್ರಾಮ ಭೇಟಿಗೆ ತೆರಳುವುದು ಸಂಪ್ರದಾಯವಾಗಿದೆ. ಕರಾವಳಿಯಲ್ಲಿ ಹಲವು ಬಗೆಯ ಭೂತಾರಾಧನೆಗಳಿವೆ. ಆದರೆ ಹುಲಿಕೋಲದಂತಹ

ಉಡುಪಿ : ಕಾಪು ಪಿಲಿಕೋಲ ಸಂಪನ್ನ- ಓರ್ವನನ್ನು ಸ್ಪರ್ಶಿಸಿದ ಪಿಲಿ Read More »

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ

ಸಮಗ್ರ ನ್ಯೂಸ್: ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಡ್ಲೂರು ಗ್ರಾಮದ ಚನ್ನಂಗಿ ನಿವಾಸಿ ತಂಗಚ್ಚನ್ ಕೆ.ಕೆ ಎಂಬುವರ ಮನೆಗೆ 2022ರ ಜೂನ್ 8 ರಂದು ರಾತ್ರಿ 8:30 ಸಮಯದಲ್ಲಿ ಅಪರಿಚಿತ ಮುಸುಕುದಾರಿ ವ್ಯಕ್ತಿಗಳು ತಂಗಚ್ಚನ್ ಅವರ ಮನೆಗೆ ಪ್ರವೇಶಿಸಿ ತಂಗಚ್ಚನ್ ಹಾಗೂ ಅವರ ಪತ್ನಿಯ ಮೇಲೆ ಹಲ್ಲೆ ನಡೆಸಿ ಮನೆಯಲ್ಲಿದ್ದ ಅಂದಾಜು ಎರಡು ಲಕ್ಷ ರೂಪಾಯಿ ಹಾಗೂ ಪತ್ನಿಯ ಕುತ್ತಿಗೆಯಲ್ಲಿದ್ದ ಎಂಟು ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಬಗ್ಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಮಡಿಕೇರಿ: 2 ವರ್ಷದ ಹಿಂದೆ ಮನೆಗೆ ನುಗ್ಗಿ ಕಳ್ಳತನ ಮಾಡಿದ ಐದು ಕಳ್ಳರ ಬಂಧನ Read More »

ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ

ಸಮಗ್ರ ನ್ಯೂಸ್‌ : ತಮಿಳಿನ ನಟಿ ಜ್ಯೋತಿಕಾ ರಾಜ್‌ಕುಮಾರ್ ರಾವ್ ನಿರ್ದೇಶನದ ಹಿಂದಿ ‘ಶ್ರೀಕಾಂತ್’ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದು ಹೇಳಿಕೆ ನೀಡುವ ಮೂಲಕ ಸೂರ್ಯ ಪತ್ನಿ ಜ್ಯೋತಿಕಾ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುತ್ತಿದ್ದಾರೆ. ಸಂದರ್ಶಕರು, ಈ ಬಾರಿ ಏಕೆ ವೋಟ್ ಮಾಡಲು ಬರಲಿಲ್ಲ? ಎಂದು ಜ್ಯೋತಿಕಾಗೆ ಕೇಳಿದ್ದರು. ಆಗ ನಾನು ಪ್ರತಿ ವರ್ಷ ವೋಟ್ ಮಾಡುತ್ತೇನೆ ಎಂದಿದ್ದಾರೆ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು. ಇದನ್ನು

ಆನ್‌ಲೈನ್ ಮೂಲಕ ಮತದಾನ ಮಾಡಿದ್ದೇನೆ ಎಂದ ತಮಿಳಿ ನಟಿ ಜ್ಯೋತಿಕಾ Read More »

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!!

ಸಮಗ್ರ ನ್ಯೂಸ್: ಬಿಸಿಲಿನ ತಾಪದಿಂದ ಕೇರಳ ರಾಜ್ಯ ರಸ್ತೆ ನಿಗಮದ ಮಲಬಾರ್ ಬಸ್ಸಿನ ಮುಂಭಾಗದ ಗಾಜು ಒಡೆದ ಪರಿಣಾಮ, ಇಬ್ಬರು ಮಕ್ಕಳು ಹಾಗೂ ಚಾಲಕ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಉರಿಮಜಲು ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಮುಂಭಾಗದ ಗಾಜು ಒಡೆದಿದೆ. ಬಸ್‌ನ ಮುಂಭಾಗದ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಬಾಲಕರು ಹಾಗೂ ಬಸ್ ಚಾಲಕ ಗಾಯಗೊಂಡಿದ್ದಾರೆ. ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು

ಕರಾವಳಿಯಲ್ಲಿ ಬಿಸಿಲ ಝಳಕ್ಕೆ ಬಸ್ ಗಾಜು ಪುಡಿಪುಡಿ| ದಿಢೀರ್ ಹೃದಯಾಘಾತದಿಂದ 6 ಮಂದಿ ಸಾವು| ಕಾದು ಕೆಂಡವಾದ ಕಡಲ ನಗರಿ!! Read More »

ವಿಶ್ವ ನಗು ದಿನ- ಮೇ ೫

ಸಮಗ್ರ ನ್ಯೂಸ್: ಪ್ರತಿ ವರ್ಷ ಮೇ ತಿಂಗಳ ಮೊದಲ ಭಾನುವಾರದಂದು ವಿಶ್ವ ನಗು ದಿನ ಎಂದು ಆಚರಿಸಿ ಸಂಭ್ರಮಿಸಲಾಗುತ್ತದೆ. ಈ ದಿನದಂದು ಎಲ್ಲಾ ಜಾತಿ, ಧರ್ಮದ ಜನರು ಯಾವುದೇ ಮತ, ಭೇದವಿಲ್ಲದೆ, ಲಿಂಗ ಭೇದವಿಲ್ಲದೆ ವಯಸ್ಸಿನ ನಿರ್ಭಂದ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಸೇರಿ ಮನ ಬಿಚ್ಚಿ ನಗುತ್ತಾರೆ. ನಿಷ್ಕಲ್ಮಶವಾಗಿ ಮತ್ತು ವ್ಯಾಪಾರೀಕರಣವಿಲ್ಲದೆ ಮನ ಬಿಚ್ಚಿ ನಕ್ಕು ವಿಶ್ವಬಾತ್ರತ್ವ, ಸಹೋದರತ್ವ ಮತ್ತು ಶಾಂತಿಯ ಸಂಕೇತ ಎಂಬಂತೆ ಎಲ್ಲರೂ ಒಟ್ಟು ಸೇರಿ ನಕ್ಕು ಮನಸ್ಸನ್ನು ಹಗುರಾಗಿಸಲು ಪ್ರಯತ್ನಿಸಲಾಗುತ್ತದೆ. ಈ ಆಚರಣೆ

ವಿಶ್ವ ನಗು ದಿನ- ಮೇ ೫ Read More »

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಈ ವಾರದ ಗೋಚಾರಫಲ

ಸಮಗ್ರ ನ್ಯೂಸ್: ದ್ವಾದಶ ರಾಶಿಗಳ ಆಧಾರದಲ್ಲಿ ಮೇ5 ರಿಂದ 11ರ ತನಕ ವಾರಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಈ ವಾರ ಯಾವ ರಾಶಿಗೆ ಶುಭ?, ಯಾರಿಗೆ ಲಾಭ? ನೋಡೋಣ ಬನ್ನಿ… ಮೇಷ ರಾಶಿ:ಯಾವುದೇ ಅಡಚಣೆ ಇಲ್ಲದೆ ಕೆಲಸ ಕಾರ್ಯಗಳಲ್ಲಿ ಮುಂದುವರೆಯುವಿರಿ. ದಿನ ಕಳೆದಂತೆ ಕ್ರಮೇಣ ಪ್ರಯತ್ನಕ್ಕೆ ತಕ್ಕಂತಹ ಶುಭಫಲಗಳು ದೊರೆಯುತ್ತವೆ. ಕಷ್ಟದ ಸಂದರ್ಭದಲ್ಲಿ ಸ್ನೇಹಿತರಿಗೆ ಸಹಾಯ ಮಾಡಬೇಕಾಗುತ್ತದೆ. ಅತಿಯಾದ ಜವಾಬ್ದಾರಿಯಿಂದ ಸ್ವಂತ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಸಾಧ್ಯವಾಗದು. ಹಣಕಾಸಿನ ಕೊರತೆ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ. ಆರೋಗ್ಯದ

ದ್ವಾದಶ ರಾಶಿಗಳ ವಾರಭವಿಷ್ಯ| ನಿಮ್ಮ ರಾಶಿಗಳ ಈ ವಾರದ ಗೋಚಾರಫಲ Read More »