May 2024

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು

ಸಮಗ್ರ ನ್ಯೂಸ್‌ : ಏಳು ವರ್ಷಗಳ ಬಳಿಕ ಮತ್ತೆ ಮಂಗಳೂರು ಲಕ್ಷದ್ವೀಪದ ನಡುವೆ ಹೈಸ್ಪೀಡ್ ಹಡಗು ಸಂಚಾರ ಆರಂಭವಾಗಿದ್ದು, ಗುರುವಾರ ಸಂಜೆ ಲಕ್ಷದ್ವೀಪದಿಂದ 150ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ದು ಪರೇಲಿ ಎಂಬ ಐಷಾರಾಮಿ ಹಡಗು ಮಂಗಳೂರಿನ ಹಳೇ ಬಂದರಿಗೆ ಬಂದಿದೆ. ಈ ಐಷಾರಾಮಿ ಹಡಗಿನಲ್ಲಿ 150 ಪ್ರಯಾಣಿಕರು ಸೇರಿದಂತೆ 8 ಮಂದಿ ಸಿಬ್ಬಂದಿ, ಓರ್ವ ಪೈಲಟ್, ಚೀಫ್ ಇಂಜಿನಿಯರ್, ಸಹಾಯಕ ಇಂಜಿನಿಯರ್‌ ಬಂದಿಳಿದಿದ್ದಾರೆ. ಕಳೆದ ಏಳು ವರ್ಷಗಳಿಂದ ಲಕ್ಷದ್ವೀಪದಿಂದ ಕೇವಲ ಸರಕು ಸಾಗಣೆ ಹಡಗುಗಳಷ್ಟೇ ಬರುತ್ತಿತ್ತು. ಸದ್ಯ […]

ಏಳು ವರ್ಷಗಳ ಬಳಿಕ ಲಕ್ಷದ್ವೀಪದಿಂದ ಮಂಗಳೂರಿಗೆ ಬಂದ ಪ್ರಯಾಣಿಕ ಹಡಗು Read More »

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು

ಸಮಗ್ರ ನ್ಯೂಸ್‌ : ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಡಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ ಮಂಗಳೂರು – ಪುತ್ತೂರು ಹಾಗೂ ಪುತ್ತೂರು – ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಹಾಗೂ ರೋಗಿಯ ಕಡೆಯವರನ್ನು ಪರ್ಯಾಯ ಆ್ಯಂಬುಲೆನ್ಸ್ ನಲ್ಲಿ ಮಂಗಳೂರಿಗೆ ಕಳುಹಿಸಿಕೊಡಲಾಯಿತು. ಸುಳ್ಯ

ಕಬಕದಲ್ಲಿ ಸರಣಿ ಅಪಘಾತ| ಆ್ಯಂಬುಲೆನ್ಸ್ ಗೆ ಡಿಕ್ಕಿ ಹೊಡೆದ ಕಾರು Read More »

ಲಕ್ನೋ: ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿ

ಸಮಗ್ರ ನ್ಯೂಸ್‌ : ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಝಾನ್ಸಿ ಜಂಕ್ಷನ್‌ ಸಮೀಪ ನಡೆದಿದೆ. ಪ್ರಕರಣ ಏಪ್ರಿಲ್‌ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 28 ವರ್ಷದ ಮೊಹಮ್ಮದ್‌ ಅರ್ಷದ್‌ ತ್ರಿವಳಿ ತಲಾಕ್‌ ನೀಡಿದ ಪರಾರಿಯಾದ ವ್ಯಕ್ತಿ. ಮೊಹಮ್ಮದ್ ಅರ್ಷದ್ ತನ್ನ ಪತ್ನಿ ಅಫ್ಸಾನಾ (26), ರೈಲು ಝಾನ್ಸಿ ನಿಲ್ದಾಣಕ್ಕೆ ಬರುತ್ತಿದ್ದಂತೆ ಅರ್ಷದ್ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ರೈಲಿನಿಂದ ಇಳಿದಿದ್ದಾನೆ. ಹೋಗುವ ಮುನ್ನ

ಲಕ್ನೋ: ರೈಲಿನಲ್ಲಿಯೇ ತನ್ನ ಪತ್ನಿಗೆ ತ್ರಿವಳಿ ತಲಾಕ್‌ ನೀಡಿ ಪರಾರಿ Read More »

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ

ಸಮಗ್ರ ನ್ಯೂಸ್‌ : ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ ಬ್ರಹ್ಮಾವರ ಬಸ್‌ ನಿಲ್ದಾಣ ಸಮೀಪದ ಲಾಡ್ಜ್ ವೊಂದರ ರೂಮಿನಲ್ಲಿ ವಾಸ್ತುತಜ್ಞ, ಜಲತಜ್ಞ, ಯೋಗ ಪಂಡಿತ, ಆಧ್ಯಾತ್ಮಿಕ ಪಂಡಿತ ಎಂಬುದಾಗಿ ಬೋರ್ಡ್ ಹಾಕಿಕೊಂಡು ವ್ಯವಹಾರ ನಡೆಸುತ್ತಿದ್ದರು. 18ರ ಹರೆಯದ ಯುವಕ ತನ್ನ ತಂದೆಯೊಂದಿಗೆ ಈತನ ಬಳಿ ವಾಸ್ತು ಕೇಳಲು ಲಾಡ್ಜ್‌ನಲ್ಲಿರುವ ರೂಮಿಗೆ ರಾತ್ರಿ 9ಗಂಟೆ ಸುಮಾರಿಗೆ ಹೋಗಿದ್ದನು.

ಉಡುಪಿ: ಯುವಕನಿಗೆ ಲೈಂಗಿಕ ಕಿರುಕುಳ-ವಾಸ್ತುತಜ್ಞನ ಬಂಧನ Read More »

ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ| ಆರು ಮಂದಿಗೆ ಗಾಯ, ಓರ್ವ ಗಂಭೀರ

ಸಮಗ್ರ ನ್ಯೂಸ್: ಕಲ್ಯಾಣ್ ಜ್ಯುವೆಲರ್ಸ್ ಅಂಗಡಿಯಲ್ಲಿ ಏರ್ ಕಂಡಿಷನರ್ ಸ್ಫೋಟಗೊಂಡ ಪರಿಣಾಮ 6 ಮಂದಿ ಗಾಯಗೊಂಡು ಓರ್ವ ಗಂಭೀರ ಸ್ಥಿತಿಯಲ್ಲಿರುವ ಘಟನೆ ಗುರುವಾರ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ನಗರದ ರಥಬೀದಿಯ ಮಾರ್ಟಿನ್ ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್‌ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡಿದ್ದು, ಇದನ್ನು ದುರಸ್ತಿಗೊಳಿಸಲು ಬಂದಿದ್ದ ನಿಂಗಪ್ಪ, ಸೈಯದ್ ಝುಬೇರ್‌ ಎಂಬವರಿಗೆ ಗಂಭೀರ ಗಾಯವಾಗಿದೆ. ಮೂವರು ಸಿಬ್ಬಂದಿಗೆ ಸಣ್ಣ ಗಾಯಗಳಾಗಿವೆ. ಗಾಯಾಳುಗಳನ್ನು ನಗರದ ವಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ್ಯುವೆಲರ್ಸ್ ಮಳಿಗೆಯಲ್ಲಿ ಕಳೆದ ಕೆಲ ದಿನಗಳಿಂದ ಸೆಂಟ್ರಲೈಜ್ಡ್ ಎಸಿಯಲ್ಲಿ

ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಎಸಿ ಸ್ಪೋಟ| ಆರು ಮಂದಿಗೆ ಗಾಯ, ಓರ್ವ ಗಂಭೀರ Read More »

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ

ಸಮಗ್ರ ನ್ಯೂಸ್‌ : ಇಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 39 ಅಂತರ್ಜಾತಿಯ ಜೋಡಿ ಸೇರಿದಂತೆ ಒಟ್ಟು 123 ವಧು–ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಸಂಜೆ 6.45ರ ಗೋದೂಳಿ ಮುಹೂರ್ತದಲ್ಲಿ ವೇದಮಂತ್ರದೊಂದಿಗೆ ನಡೆದ ಮದುವೆ ಕಾರ್ಯಕ್ರಮಕ್ಕೆ ನೂರಾರು ಜನರು ಸಾಕ್ಷಿಯಾದರು. ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತ್ತು ಹೇಮಾವತಿ ಹೆಗ್ಗಡೆ ಅವರು ಬೀಡಿನಲ್ಲಿ ವಧುವಿಗೆ ಸೀರೆ, ರವಿಕೆ ಮತ್ತು ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 6 ಗಂಟೆಗೆ ವಧು–ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಹಾಕಿ ಸಭಾಭವನದಲ್ಲಿ ಹಾಜರಾದರು.

ಧರ್ಮಸ್ಥಳ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 123 ಜೋಡಿ Read More »

ಉಡುಪಿ‌‌: ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು

ಸಮಗ್ರ ನ್ಯೂಸ್‌ : ವಿಪರೀತ ಸೆಖೆಯಿದೆ ಎಂದು ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾವನ್ನಪ್ಪಿದ ಘಟನೆ ಬೆಳಕಿಗೆ ಬಂದಿದೆ. ಮೃತಪಟ್ಟವರನ್ನು ಅಜೆಕಾರು ಆಶ್ರಯನಗರ ನಿವಾಸಿ ಸುಂದರ ನಾಯ್ಕ್ ( 55) ಎಂದು ಗುರುತಿಸಲಾಗಿದೆ. ಸುಂದರ ನಾಯ್ಕ್ ಕಾರ್ಕಳ ತಾಲೂಕಿನ ಎಣ್ಣೆ ಹೊಳೆ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದರು. ಬೆಳಿಗ್ಗೆ 6:30 ವೇಳೆಗೆ ಗಮನಿಸಿದಾಗ ಟೆರೇಸ್ ಮೇಲಿಂದ ಕೆಳಗೆ ಬಿದ್ದಿರೋದು ಬೆಳಕಿಗೆ ಬಂದಿದೆ.

ಉಡುಪಿ‌‌: ವಿಪರೀತ ಸೆಖೆಯಿದೆ ಎಂದು ಟೆರೇಸ್ ನಲ್ಲಿ ಮಲಗಿದ್ದ ಶಿಕ್ಷಕ ಸಾವು Read More »

ಹಾಸನ: ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ

ಸಮಗ್ರ ನ್ಯೂಸ್‌ : ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳು ದೇಶಾದ್ಯಂತ ಭಾರೀ ಚರ್ಚೆ ಯಾಗುತ್ತಿದ್ದು, ಈ ನಡುವೆ ಅಭಿಮಾನಿಯೊಬ್ಬ ಪ್ರಜ್ವಲ್‌ ರೇವಣ್ಣಗೆ ಶುಭಾಶಯಗಳನ್ನು ತಿಳಿಸಿದ್ದಾನೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಅಖಾಡಕ್ಕೆ ಇಳಿದಿರುವ ಪ್ರಜ್ವಲ್‌ ರೇವಣ್ಣಗೆ ಅಭಿಮಾನಿ ಶುಭಾಶಯಗಳನ್ನು ತಿಳಿಸಿ ಪತ್ರ ಬರೆದಿದ್ದಾನೆ. ಈ ಪತ್ರ ಹಾಸನ ನಗರದ ಆರ್.ಸಿ. ರಸ್ತೆಯಲ್ಲಿರುವ ಸಂಸದರ ಕಚೇರಿ ಬಾಗಿಲ ಬಳಿ ಸಿಕ್ಕಿದೆ. ನೀವು ಈಗಾಗಲೇ ಹಾಸನ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ

ಹಾಸನ: ಸಂಸದ ಪ್ರಜ್ವಲ್‌ ಗೆ ಅಭಿಮಾನಿಯಿಂದ ಶುಭಾಶಯ ಪತ್ರ Read More »

ಲೋಕಸಭಾ ಚುನಾವಣೆ/ ಇಂದು ಚಿಕ್ಕೋಡಿಯಲ್ಲಿ ಅಮಿತ್ ಷಾ ಪ್ರಚಾರ

ಸಮಗ್ರ ನ್ಯೂಸ್: ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಪರ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಹುಕ್ಕೇರಿ ಪಟ್ಟಣದ ವಿಶ್ವರಾಜ ಭವನದಲ್ಲಿ ಮಧ್ಯಾಹ್ನ 12 ಗಂಟೆಗೆ ಬಹಿರಂಗ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರಾದ ಪ್ರಭಾಕರ ಕೋರೆ, ರಮೇಶ್ ಕತ್ತಿ, ನಿಖಿಲ್ ಕತ್ತಿ, ಶಶಿಕಲಾ ಜೊಲ್ಲೆ, ದುರ್ಯೋಧನ ಐಹೊಳೆ, ಮಹಾಂತೇಶ ಕವಟಗಿ ಮಠ ಭಾಗವಹಿಸಲಿದ್ದಾರೆ.

ಲೋಕಸಭಾ ಚುನಾವಣೆ/ ಇಂದು ಚಿಕ್ಕೋಡಿಯಲ್ಲಿ ಅಮಿತ್ ಷಾ ಪ್ರಚಾರ Read More »

ಬೀದರ್ : ಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ? ಸಚಿವ ಭಗವಂತ ಖೂಬಾ

ಸಮಗ್ರ ನ್ಯೂಸ್‌ : ‘ಭಾಲ್ಕಿ ಹಿರೇಮಠದ ಪೂಜ್ಯರು, ಈ ಭಾಗದ ನಡೆದಾಡುವ ದೇವರೆಂಬ ಗೌರವಕ್ಕೆ ಪಾತ್ರರಾಗಿರುವ ಚನ್ನಬಸವ ಪಟ್ಟದ್ದೇವರು ಬೆವರು ಸುರಿಸಿ ಕಟ್ಟಿದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯನ್ನು ಕಸಿದುಕೊಂಡು, ಭಾಲ್ಕಿ ಹಿರೇಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ? ಇಂತಹವರು ಇನ್ನೊಬ್ಬರ ಬಗ್ಗೆ ಮಾತನಾಡಬಹುದಾ?’ ಹೀಗೆಂದು ಸಚಿವ ಈಶ್ವರ ಬಿ. ಖಂಡ್ರೆಯವರನ್ನು ಕೇಂದ್ರ ಸಚಿವ ಭಗವಂತ ಖೂಬಾ ಪ್ರಶ್ನಿಸಿದ್ದಾರೆ. ‘ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಜನರ ಮುಂದೆ ಹೇಳಿರುವ ಸತ್ಯಾಂಶಗಳು ಈಶ್ವರ ಖಂಡ್ರೆಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ. ಸತ್ಯ

ಬೀದರ್ : ಮಠದ ಆಸ್ತಿ ಹೊಡೆದವರು ಶಾಸಕರಾಗಲು ಯೋಗ್ಯರೇ? ಸಚಿವ ಭಗವಂತ ಖೂಬಾ Read More »