Ad Widget .

ಬೆಳ್ತಂಗಡಿ: 6 ದಿನಗಳ ಕಾಲ ಆಹಾರವಿಲ್ಲದೆ ಕಾಡಿನಲ್ಲಿ ನಾಪತ್ತೆಯಾಗಿದ್ದ ವೃದ್ದ ಮರಳಿ ಮನೆಗೆ| ಕಾಡಿನಲ್ಲಿ ಕೇಳಿಸಿತ್ತು ಅಶರೀರವಾಣಿ!!

ಸಮಗ್ರ ನ್ಯೂಸ್: ಕಟ್ಟಿಗೆ ತರಲು ಕಾಡಿಗೆ ಹೋಗಿ ನಾಪತ್ತೆಯಾಗಿದ್ದ 82 ವರ್ಷದ ವೃದ್ಧರೊಬ್ಬರು ಪವಾಡ ಸದೃಶವಾಗಿ ಮನೆಗೆ ಮರಳಿರುವ ಘಟನೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಐಂಗುಡ‌ ನಿವಾಸಿ ವಾಸು ರಾಣ್ಯ 6 ದಿನಗಳ ಬಳಿಕ ಸಿಕ್ಕಿದ್ದಾರೆ.

Ad Widget . Ad Widget .

ಶಿಬಾಜೆ ಗ್ರಾಮದ 82 ವರ್ಷದ ವಯೋವೃದ್ಧ ವಾಸು ರಾಣ್ಯ ಎಂಬುವವರು ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದರು. ಸದ್ಯ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡ ಅವರನ್ನು ಪತ್ತೆ ಹಚ್ಚಿ ಮನೆಗೆ ಸೇರಿಸಿದೆ.

Ad Widget . Ad Widget .

ವಾಸು ರಾಣ್ಯ ಅವರು ಮೇ 21ರ ಬೆಳಗ್ಗೆ ಕೈಯಲ್ಲೊಂದು ಕತ್ತಿ ಹಿಡಿದು ಕಟ್ಟಿಗೆ ತರಲು ಎಂದು ಮನೆ ಸಮೀಪವಿರುವ ಗುಡ್ಡಕ್ಕೆ ತೆರಳಿದ್ದರು. ಮಧ್ಯಾಹ್ನದವರೆಗೂ ವಾಸು ರಾಣ್ಯ ಅವರು ಮನೆಗೆ ಬಂದಿರಲಿಲ್ಲ. ಹೀಗಾಗಿ ಕಟುಂಬಸ್ಥರು ಸ್ಥಳೀಯರ ಜೊತೆ ಸೇರಿಕೊಂಡು ಹುಡುಕಾಡಿದರು. ಸುಮಾರು ಐದು ದಿನಗಳ ಕಾಲ ಸುತ್ತಮುತ್ತ ಹುಡುಕಿದರೂ ವಾಸು ರಾಣ್ಯ ಅವರು ಪತ್ತೆಯಾಗಿರಲಿಲ್ಲ.

ಮೇ 26ರ ಬೆಳಗ್ಗೆ ಮನೆಯವರು ಆಡು ಮೇಯಿಸಲೆಂದು ಮನೆ ಸಮೀಪವಿರುವ ಗುಡ್ಡೆಗೆ ತೆರಳಿದಾಗ ಕೂ…ಕೂ.. ಎಂಬ ಕೂಗು ಕೇಳಿ ಬಂತೆನ್ನಲಾಗಿದೆ. ಈ ಕೂಗಿನ ಜಾಡು ಹಿಡಿದು ಸ್ಥಳೀಯರು ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದವರು ಹುಡುಕಾಟ ನಡೆಸಿದಾಗ ಭಂಡಿಹೊಳೆ ಕಾಡಿನ ಸುಮಾರು 2.5 ಕಿ. ಮೀ. ದೂರದಲ್ಲಿ ವಾಸು ರಾಣ್ಯ ಅವರು ಪತ್ತೆಯಾಗಿದ್ದಾರೆ.

ಬಳಿಕ ಅವರನ್ನು ಕೊಕ್ಕಡ ಸಮುದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಾಸು ರಾಣ್ಯ ಆರೋಗ್ಯವಾಗಿದ್ದು, ತನ್ನನ್ನು ಯಾರೋ ಬಾ.. ಬಾ.. ಎಂದು ಕರೆದಂತಾಯಿತು. ಹಾಗಾಗಿ ಧ್ವನಿಯ ಹಿಂದೆ ನಾನು ಹೋದೆ. ಕಾಡಲ್ಲಿ ನನಗೆ ಆಹಾರ ಸಿಗಲಿಲ್ಲ. ಹಾಗಾಗಿ ಆಹಾರವನ್ನೇನೂ ತಾನು ತೆಗೆದುಕೊಂಡಿಲ್ಲ. ಕೇವಲ ನೀರು ಮಾತ್ರ ಕುಡಿಯುತ್ತಿದ್ದೆ ಎಂದು ವಾಸು ಅವರು ತಿಳಿಸಿದ್ದಾರೆ.

Leave a Comment

Your email address will not be published. Required fields are marked *