ಉಜಿರೆ: ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಮಿಸ್ಸಿಂಗ್; ದೂರು ದಾಖಲು

ಸಮಗ್ರ ನ್ಯೂಸ್: ಉಜಿರೆಯ ಧರ್ಮಸ್ಥಳ ಕ್ರೀಡಾ ವಸತಿ ನಿಲಯದಿಂದ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ ನಡೆದಿದೆ. ಕ್ರೀಡಾ ವಸತಿ ನಿಲಯದ ವಾರ್ಡನ್‌ ಮೋಹಿನಿ ಎಂಬುವವರು ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ.

Ad Widget ... ..

ಬೇಲೂರು ಮೂಲದ ದಿವ್ಯಾ ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ. ಇದೀಗ ಘಟನೆಯ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಿಸಿಕೊಳ್ಳಲಾಗಿದೆ.

Ad Widget

Leave a Comment

Your email address will not be published. Required fields are marked *