ಹಾಜಬ್ಬರ ಶಾಲೆಯಲ್ಲಿ ಪಿಯು ಕಾಲೇಜು ಆರಂಭ/ ನನಸಾದ ಹಾಜಬ್ಬರ ಕಾಲೇಜಿನ ಕನಸು

ಸಮಗ್ರ ನ್ಯೂಸ್: ಪದ್ಮಶ್ರೀ ಹರೇಕಳ ಹಾಜಬ್ಬರ ಹಲವು ವರ್ಷಗಳ ಕನಸಿನ ಪಿಯು ಕಾಲೇಜು ಕೊನೆಗೂ ಜೂ.1ಕ್ಕೆ ಶುಭಾರಂಭವಾಗಲಿದ್ದು, ಈಗಿರುವ ಶಾಲೆ ಕೊಠಡಿಯಲ್ಲೇ ತಾತ್ಕಾಲಿಕವಾಗಿ ಕಾಲೇಜು ಆರಂಭವಾಗಲಿದೆ.

Ad Widget ... ..

ನೂತನ ಪಿಯು ಕಾಲೇಜಿಗೆ ಈವರೆಗೆ (ಮೇ 30ರವರೆಗೆ) 25 ಮಂದಿ ಅರ್ಜಿ ಪಡೆದುಕೊಂಡಿದ್ದು, ಅದರಲ್ಲಿ 14 ಮಂದಿ ವಿದ್ಯಾರ್ಥಿಗಳು ಪ್ರವೇಶ ಪಡೆದುಕೊಂಡಿದ್ದಾರೆ. ಮಕ್ಕಳ ದಾಖಲಾತಿಗೆ ಇನ್ನೂ 10-15 ದಿನ ಇರುವುದರಿಂದ ಇನ್ನಷ್ಟು ವಿದ್ಯಾರ್ಥಿಗಳು ಪ್ರವೇಶ ಪಡೆಯುವ ನಿರೀಕ್ಷೆ ಹಾಜಬ್ಬ ಇಟ್ಟುಕೊಂಡಿದ್ದಾರೆ.

Ad Widget

ಪಿಯು ಕಾಲೇಜು ಆರಂಭಿಸಲು ಕೆಲ ವರ್ಷಗಳಿಂದ ಜಿಲ್ಲಾಡಳಿತ, ಸರ್ಕಾರ, ಸಚಿವರಾದಿಯಾಗಿ ಎಲ್ಲರ ಬಳಿಯೂ ಮನವಿ ಮಾಡಿಕೊಂಡ ಪರಿಣಾಮ ಈ ಶೈಕ್ಷಣಿಕ ವರ್ಷದಿಂದಲೇ ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿತ್ತು. ಈಗಿರುವ ಪ್ರೌಢಶಾಲೆಯನ್ನು ಉನ್ನತೀಕರಿಸಿ ಹೊಸದಾಗಿ ಸರ್ಕಾರಿ ಪಿಯು ಕಾಲೇಜು ಆರಂಭಕ್ಕೆ ಆದೇಶ ನೀಡಿತ್ತು. ಇನ್ನೊಂದೇ ದಿನದಲ್ಲಿ ಅದು ಸಾಕಾರವಾಗಲಿದೆ. ಹಾಜಬ್ಬರ ಇತ್ತೀಚಿನ ಅತಿದೊಡ್ಡ ಕನಸು ಈ ಮೂಲಕ ನನಸಾಗುತ್ತಿದೆ.

Leave a Comment

Your email address will not be published. Required fields are marked *