Ad Widget .

ರಾಹುಲ್ ಗಾಂಧಿ ಪ್ರಧಾನಿ ಆಗಬೇಕು ಎಂಬುದು ನನ್ನ ಆಸೆ/ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಸಮಗ್ರ ನ್ಯೂಸ್: “ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಪ್ರಿಯಾಂಕಾ ವಾದ್ರಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು’ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೇಶದಲ್ಲಿ ಯಾರಾದರೂ ಪ್ರಧಾನಿಯಾಗಬೇಕು ಎಂದರೆ ನನ್ನ ಆಯ್ಕೆ ರಾಹುಲ್ ಗಾಂಧಿ, ದೇಶದ ಯುವಕ-ಯುವತಿಯರು, ದೇಶದ ಶಕ್ತಿಯನ್ನು ಅವರು ಪ್ರತಿನಿಧಿಸುತ್ತಾರೆ. ಹಾಗಾಗಿ, ರಾಹುಲ್ ಗಾಂಧಿ ಅವರೇ ಪ್ರಧಾನಿಯಾಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಎನ್‍ಡಿಟಿವಿಯೊಂದಿಗೆ ಸಂದರ್ಶನದಲ್ಲಿ ಅವರು ಹೇಳಿದ್ದಾರೆ

Ad Widget . Ad Widget .

ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದ್ದು ಜೂನ್ 4ರ ಫಲಿತಾಂಶದತ್ತ ಎಲ್ಲರ ಗಮನ ಇರಲಿದೆ. ಇತ್ತ ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ ಎಂಬುದಾಗಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಅತ್ತ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ ಗೆಲುವಿನ ವಿಶ್ವಾಸದಲ್ಲಿದೆ.

Ad Widget . Ad Widget .

Leave a Comment

Your email address will not be published. Required fields are marked *