ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಕುರಿತ ಚುನಾವಣೋತ್ತರ ಸಮೀಕ್ಷೆ ಹೊರಬಂದಿದ್ದು, ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲಿದೆ ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಇದರ ಬೆನ್ನಲ್ಲೇ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಳಗ್ಗೆ 11 ಗಂಟೆಗೆ ನಡೆಯಲಿರುವ ವರ್ಚುಯಲ್ ಸಭೆಯ ನಂತರ, ಮಧ್ಯಾಹ್ನ 1 ಗಂಟೆಗೆ ದೇಶದಾದ್ಯಂತ ಪ್ರಮುಖ ಕಾಂಗ್ರೆಸ್ ನಾಯಕರೊಂದಿಗೆ ಖರ್ಗೆ ಮತ್ತು ಗಾಂಧಿ ವರ್ಚುವಲ್ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಇದೆ.
ಜೂನ್ 4 ರಂದು ಮತ ಎಣಿಕೆಯ ದಿನದ ಮೌಲ್ಯಮಾಪನ ಮತ್ತು ಸಿದ್ಧತೆಗಳ ಬಗ್ಗೆ ಚರ್ಚಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹೋಟ್, ಸಚಿನ್ ಪೈಲಟ್ ಮತ್ತು ಪಕ್ಷದ ಇತರ ನಾಯಕರು ಸಭೆ ಸೇರುವ ನಿರೀಕ್ಷೆಯಿದೆ.