Ad Widget .

MLC ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣಾ ಬೆನ್ನಲ್ಲೆ ವಿಧಾನಸಭೆಯಿಂದ ವಿಧಾನ ಪರಿಷತ್‌ ಚುನಾವಣೆಗೆ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.

Ad Widget . Ad Widget .

ಹೌದು ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ 7 ಜನರಿಗೆ ಮಣೆ ಹಾಕಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ. ಇನ್ನು ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಿದೆ.

Ad Widget . Ad Widget .

ನಾಮಪತ್ರ ಸಲ್ಲಿಕೆಗೆ ನಾಳೆ (ಜೂನ್ 03) ಕೊನೆ ದಿನವಾಗಿದ್ದು, ಕೊನೆ ಕ್ಷಣದಲ್ಲಿ ಕಾಂಗ್ರೆಸ್ ವಿಧಾನ ಪರಿಷತ್ ಸ್ಥಾನಕ್ಕೆ ತನ್ನ ಅಭ್ಯರ್ಥಿ ಗಳನ್ನು ಘೋಷಿಸಿದೆ. ಹೈಕಮಾಂಡ್ ಕೋಟದ ಅಡಿ ಎನ್ ಎಸ್ ಭೋಸರಾಜು, ಕಾರ್ಯಾಧ್ಯಕ್ಷ ವಸಂತ್ ಕುಮಾರ್, ಜಗದೇವ್ ಗುತ್ತೇದಾರ್ ಗೆ ಟಿಕೇಟ್ ಘೋಷಿಸಲಾಗಿದೆ. ರಾಯಚೂರು ನಾಯಕರ ವಿರೋಧದ ನಡುವೆಯೂ ಎನ್ ಎಸ್ ಭೋಸರಾಜು ಮರು ಆಯ್ಕೆ ಆಗಲಿದ್ದಾರೆ.‌ ನಾಳೆ ಎಲ್ಲ ಅಭ್ಯರ್ಥಿ ಗಳೂ ನಾಮಪತ್ರ ಸಲ್ಲಿಕೆ ಮಾಡಲಿದ್ದು, ಜೂನ್ 13ರಂದು ಚುನಾವಣೆ ನಡೆಯಲಿದೆ.

Leave a Comment

Your email address will not be published. Required fields are marked *