ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ| ಮಹಿಳೆ ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಬೆಂಬಲಿಸಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರು ಸೇರಿ ಹಲವರನ್ನು ಪುಲಿಕೇಶಿ ನಗರ ಪೊಲೀಸ್ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Ad Widget ... ..

ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್‌ ದಾಳಿ ಖಂಡಿಸಿ ಹಲವೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ನಗರದ ಪುಲಿಕೇಶಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರು ಸೇರಿ ಹಲವರು ಪ್ರತಿಭಟನೆ ನಡೆಸುತ್ತಿದ್ದರು. ಹೀಗಾಗಿ ಅವರನ್ನು ವಶಕ್ಕೆ ಪಡೆಯಲಾಗಿದೆ. ನಂತರ ಠಾಣೆಗೆ ಕರೆದೊಯ್ದ ವೇಳೆ ಪ್ಯಾಲೆಸ್ತೀನ್‌ ಪರ ಘೋಷಣೆ ಕೂಗಿ ಮಹಿಳೆ ಹೈಡ್ರಾಮಾ ಸೃಷ್ಟಿಸಿದ್ದಾಳೆ.

Ad Widget

Leave a Comment

Your email address will not be published. Required fields are marked *