Ad Widget .

ರಾಮನಾಡಿನಲ್ಲಿ ಬಿಜೆಪಿಗೆ ಹಿನ್ನಡೆ| ಅಯೋಧ್ಯೆಯಲ್ಲಿ ಮುನ್ನಡೆ ಸಾಧಿಸಿದ ಎಸ್ಪಿ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ 2024ರ ಮತ ಎಣಿಕೆ ನಡೆಯುತ್ತಿದ್ದು, ಎನ್‌ಡಿಎ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ. ಉತ್ತರ ಪ್ರದೇಶವನ್ನು ಕ್ಲೀನ್ ಸ್ವೀಪ್ ಮಾಡುವ ಕನಸು ಕಂಡಿದ್ದ ಬಿಜೆಪಿಗೆ ಆಘಾತ ಎದುರಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಆರಂಭಿಕ ಹಂತದಲ್ಲಿ ಕೇವಲ 35 ಕ್ಷೇತ್ರಗಳಲ್ಲಿ ಮಾತ್ರ ಬಿಜೆಪಿ ಮುನ್ನಡೆ ಪಡೆದುಕೊಂಡಿದ್ದು, 35 ಕ್ಷೇತ್ರಗಳಲ್ಲಿ ಸಮಜಾವಾದಿ ಪಕ್ಷ ಮುನ್ನಡೆ ಸಾಧಿಸಿದೆ.

Ad Widget . Ad Widget . Ad Widget .

ಅಯೋಧ್ಯೆ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಹಿನ್ನಡೆಯಾಗಿರುವುದು ಅಚ್ಚರಿ ಉಂಟು ಮಾಡಿದೆ.

ರಾಮ ಮಂದಿರ ಕಟ್ಟಿದ ಬಳಿಕ ಕ್ಷೇತ್ರದಲ್ಲಿ ಬಿಜೆಪಿ ಜನಪ್ರಿಯತೆ ಹೆಚ್ಚುತ್ತದೆ ಎಂದೇ ಭಾವಿಸಲಾಗಿತ್ತು. ಬಿಜೆಪಿ ಇಲ್ಲಿ ಸುಲಭ ಗೆಲುವು ಸಾಧಿಸುತ್ತದೆ ಎಂದು ಎಣಿಸಲಾಗಿತ್ತು, ಆದರೆ ಇದೇ ಕ್ಷೇತ್ರದಲ್ಲಿ ಈಗ ಸಮಾಜವಾದಿ ಪಕ್ಷದ ಅಭ್ಯರ್ಥಿ ಮುನ್ನಡೆ ಪಡೆದುಕೊಂಡಿದ್ದಾರೆ.

Leave a Comment

Your email address will not be published. Required fields are marked *