Ad Widget .

ಬೆಂಗಳೂರು: ಹಾಸ್ಟೆಲ್ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥ

ಸಮಗ್ರ ನ್ಯೂಸ್: ಬೆಂಗಳೂರು ವಿಶ್ವವಿದ್ಯಾಲಯದ ಬಿಸಿಎಂ ಹಾಸ್ಟೆಲ್ ನಲ್ಲಿ ಕಳಪೆ ಆಹಾರ ಸೇವಿಸಿ 10 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, 40 ವಿದ್ಯಾರ್ಥಿಗಳಿಗೆ ವಾಂತಿ, ಬೇಧಿಯಾಗಿರುವ ಘಟನೆ ನಡೆದಿದೆ.

Ad Widget . Ad Widget .

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ಆಗಿದ್ದು. ಊಟ ಸರಿಯಿಲ್ಲವೆಂದು ಆರೋಪಿಸಿ ರೋಡಿಗಿಳಿದಿದ್ದ ವಿದ್ಯಾರ್ಥಿಗಳು ಜ್ಞಾನಭಾರತಿ ಆವರಣದ ಮುಖ್ಯರಸ್ತೆ ತಡೆದು ಧರಣಿ ಮಾಡಿದ್ದಾರೆ. ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಆಗಮಿಸಿ ಹಾಸ್ಟೆಲ್ ವಿದ್ಯಾರ್ಥಿಗಳ ಮನವೊಲಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಪೊಲೀಸರ ಮನವೊಲಿಕೆ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ. ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದ ನಂತರ ಸಂಚಾರ ವ್ಯವಸ್ಥೆ ಮಾಡಲಾಯಿತು.

Ad Widget . Ad Widget .

Leave a Comment

Your email address will not be published. Required fields are marked *