Ad Widget .

ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ|ಜೂ.08 ರಂದು ಮತ್ತೆ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಪ್ರಧಾನಿ ಸ್ಥಾನಕ್ಕೆ ಮೋದಿ ರಾಜೀನಾಮೆ ನೀಡಿದ್ದಾರೆ. ಮೋದಿ ಜೊತೆಗೆ ಸಚಿವರು ರಾಜೀನಾಮೆ ಸಲ್ಲಿಸಿದ್ದು, ರಾಜೀನಾಮೆಯನ್ನು ರಾಷ್ಟ್ರಪತಿ ಮುರ್ಮು ಅಂಗೀಕರಿಸಿದ್ದಾರೆ ಎಂದು ತಿಳಿದು ಬಂದಿದೆ

Ad Widget . Ad Widget .

Ad Widget . Ad Widget .

ಜೂ.8 ರಂದು 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ‘ನರೇಂದ್ರ ಮೋದಿ’ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ದೆಹಲಿ ಮೂಲಗಳು ಮಾಹಿತಿ ನೀಡಿದೆ.

ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಆದರೆ ಈ ಬಾರಿ ಗೆಲುವಿನ ಅಂತರ ಭಾರೀ ಕಡಿಮೆಯಾಗಿದೆ. ಮೋದಿ ಅವರು 1,52,513 ಮತಗಳ ಅಂತರದಿಂದ ಕಾಂಗ್ರೆಸ್ ಅಜಯ್ ರೈ ಅವರನ್ನು ಸೋಲಿಸಿದ್ದಾರೆ.

Leave a Comment

Your email address will not be published. Required fields are marked *