ನೀಟ್ ಪರೀಕ್ಷೆಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ಮಂಗಳೂರಿನ ಅರ್ಜುನ್

ಸಮಗ್ರ ನ್ಯೂಸ್: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (ನೀಟ್-ಯುಜಿ) ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ವಿದ್ಯಾರ್ಥಿ ಅರ್ಜುನ್ ಕಿಶೋರ್ (720ಕ್ಕೆ 720 ಅಂಕ) ಅಖಿಲ ಭಾರತ ಮಟ್ಟದಲ್ಲಿ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

Ad Widget ... ..

ದೆಹಲಿಯ ಏಮ್ಸ್‌ನಲ್ಲಿ ವೈದ್ಯಕೀಯ ಶಿಕ್ಷಣ ಓದುವುದು ನನ್ನ ಕನಸಾಗಿತ್ತು. ಕಾಲೇಜು ವೇಳಾಪಟ್ಟಿಯನ್ನು ಚಾಚೂತಪ್ಪದೆ
ಅನುಸರಿಸುತ್ತಿದ್ದೆ. ಯಾವುದೇ ಅನುಮಾನ ಇದ್ದರೂ ಉಪನ್ಯಾಸಕರು ಪರಿಹರಿಸುತ್ತಿದ್ದರು. ಕಠಿಣ ಪರಿಶ್ರಮ ಮತ್ತು ಏಕಾಗ್ರತೆಯ ಓದು ಗುರಿ ಸಾಧನೆಗೆ ಸಹಕಾರಿಯಾಯಿತು’ ಎಂದು ಅರ್ಜುನ್ ಪ್ರತಿಕ್ರಿಯಿಸಿದ್ದಾರೆ.

Ad Widget

ಅರ್ಜುನ್ ತಂದೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಫಾರ್ಮಕಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಕಿಶೋರ್ ಮತ್ತು ಸ್ತ್ರೀರೋಗ ತಜ್ಞೆ ಡಾ. ರಶ್ಮಿ ಅವರ ಪುತ್ರ ಅರ್ಜುನ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ 99.8 ಅಂಕ ಗಳಿಸಿದ್ದರು.

Leave a Comment

Your email address will not be published. Required fields are marked *