Ad Widget .

ಉಡುಪಿ: ಬಸ್ ಚಾಲನೆ ವೇಳೆ ಹೃದಯಾಘಾತ| ಶಾಲಾ ಮಕ್ಕಳು ಅಪಾಯದಿಂದ ಪಾರು

ಸಮಗ್ರ ನ್ಯೂಸ್: ಚಾಲನೆಯಲ್ಲಿ ಲಘು ಹೃದಯಾಘಾತಕ್ಕೆ ಒಳಗಾದ ಶಾಲಾ ಬಸ್ಸೊಂದರ ಚಾಲಕನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜೂ.5ರಂದು ಸಂಜೆ ವೇಳೆ ಪೆರಂಪಳ್ಳಿ ಎಂಬಲ್ಲಿ ನಡೆದಿದೆ.

Ad Widget . Ad Widget .

ಬ್ರಹ್ಮಾವರದ ಖಾಸಗಿ ಶಾಲೆಯೊಂದರ ವಾಹನವು ಸುಮಾರು 65 ಮಕ್ಕಳನ್ನು ಕರೆದುಕೊಂಡು ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರಪಂಳ್ಳಿ ಬಳಿ ಹೋಗುತ್ತಿದ್ದಾಗ ಚಾಲಕ ಆಲ್ವಿನ್ ಡಿಸೋಜ ಅವರಿಗೆ ಲಘು ಹೃದಯಾಘಾತ ಸಂಭವಿಸಿತ್ತೆನ್ನಲಾಗಿದೆ.

Ad Widget . Ad Widget .

ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದರು. ಇದರಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ತೀವ್ರವಾಗಿ ಅಸ್ವಸ್ಥರಾಗಿರುವ ಚಾಲಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.

Leave a Comment

Your email address will not be published. Required fields are marked *