ರಾಜ್ಯದ‌ ಮೂರು ವಿಧಾನಸಭೆ, ಒಂದು ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಫಿಕ್ಸ್

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೂವರು ಶಾಸಕರು ಮತ್ತು ಒಬ್ಬರು ವಿಧಾನ ಪರಿಷತ್ ಸದಸ್ಯರು ಜಯಗಳಿಸಿದ ಹಿನ್ನೆಲೆಯಲ್ಲಿ ಈ ಕ್ಷೇತ್ರಗಳಿಗೆ ಚುನಾವಣೆ ನಡೆಯುವುದು ಖಚಿತವಾಗಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಹಾಲಿ ವಿಧಾನಸಭೆಯ ಮೂವರು ಸದಸ್ಯರು ಮತ್ತು ವಿಧಾನ ಪರಿಷತ್ತಿನ ಒಬ್ಬ ಸದಸ್ಯ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ಇವರಿಂದ ತೆರವಾಗಲಿರುವ ಸ್ಥಾನಗಳಿಗೆ ಉಪಚುನಾವಣೆ ಎದುರಾಗಲಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಚನ್ನಪಟ್ಟಣ ಶಾಸಕರಾದ ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದಾರೆ. ಶಿಗ್ಗಾಂವಿ ಶಾಸಕರಾದ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದಾರೆ. ಸಂಡೂರು ಶಾಸಕ ತುಕಾರಾಂ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ.

ಇನ್ನು ವಿಧಾನಪರಿಷತ್ ನಲ್ಲಿ ದಕ್ಷಿಣ ಕನ್ನಡ -ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪ್ರತಿನಿಧಿಸುತ್ತಿರುವ ಕೋಟ ಶ್ರೀನಿವಾಸ ಪೂಜಾರಿ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜಯಗಳಿಸಿದ್ದು, ಈ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುವುದು ಖಚಿತವಾಗಿದೆ.

Leave a Comment

Your email address will not be published. Required fields are marked *