ಅಪ್ಪ- ಅಮ್ಮನ ಜಗಳ ಬಿಡಿಸಲು ಹೋದ ಮಗನ ಆಕಸ್ಮಿಕ ಕೊಲೆ..!

ಸಮಗ್ರ ನ್ಯೂಸ್: ಅಜ್ಜಿಯನ್ನು ನೋಡಿಕೊಳ್ಳುವ ವಿಚಾರಕ್ಕೆ ಅಪ್ಪ- ಅಮ್ಮನ ನಡುವೆ ಜಗಳ ಶುರುವಾಗಿದ್ದು, ಇದನ್ನು ಬಿಡಿಸಲು ಹೋದ ಮಗ ಆಕಸ್ಮಿಕವಾಗಿ ಕೊಲೆಯಾದ ಘಟನೆ ಬೆಂಗಳೂರಿನ ಜರಗನಹಳ್ಳಿಯಲ್ಲಿ ನಡೆದಿದೆ.

Ad Widget ... .. Ad Widget .

ಯಶವಂತ್ (23) ತಂದೆಯಿಂದಲೇ ಕೊಲೆಯಾದ ಪುತ್ರ. ಇತ ಇನ್ಫೋಸಿಸ್ ಕಂಪನಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ. ತಂದೆ ಮಾಡಿದ್ದ ಸಾಲವನ್ನು ಈತನೇ ತೀರಿಸುತ್ತಿದ್ದ. ಹೀಗಿರುವಾಗ ಆತನ ಅಜ್ಜಿ ಹಾಸಿಗೆ ಹಿಡಿದಿದ್ದಾರೆ. ಆಕೆಯನ್ನು ನೋಡಿಕೊಳ್ಳುವ ವಿಚಾರಕ್ಕೆ ತಂದೆ-ತಾಯಿ ನಡುವೆ ಆಗಾಗ ಜಗಳ ಆಗುತ್ತಿತ್ತು. ಬೆಳಗ್ಗೆಯೂ ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಜಗಳ ಬಿಡಿಸಲು ಹೋದ ಮಗನನ್ನು ಹೆದರಿಸಲು ತಂದೆ ಅಡುಗೆ ಮನೆಯಿಂದ ಚಾಕು ತಂದು ಇರಿಯಲು ಹೋಗಿದ್ದ. ಆದರೆ, ಆಕಸ್ಮಾತಾಗಿ ಚಾಕು ಯುವಕನ ಎದೆಗೆ ಆಳವಾಗಿ ನಾಟಿ ಪ್ರಾಣ ಹೋಗಿದೆ. ಸದ್ಯ ಆರೋಪಿ ತಂದೆ ಬಸವರಾಜುವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Leave a Comment

Your email address will not be published. Required fields are marked *