ಸಚಿವ ನಾಗೇಂದ್ರ ಜೊತೆ ಸಿಎಂ ಮಹತ್ವದ ಚರ್ಚೆ|ಇಂದು ರಾಜೀನಾಮೆ ಸಾಧ್ಯತೆ..?

ಸಮಗ್ರ ನ್ಯೂಸ್: ವಾಲ್ಮೀಕಿ ನಿಗಮದಲ್ಲಿ ನಡೆದ ಕೋಟ್ಯಾಂತರ ರೂಪಾಯಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ, ಇಲಾಖೆಯ ಅಧಿಕಾರಿಗಳನ್ನು ಬಂಧಿಸಿದೆ. ಅಷ್ಟೇ ಅಲ್ಲದೆ ಮತ್ತೊಂದೆಡೆ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟುಹಿಡಿದಿದೆ. ಸಚಿವ ನಾಗೇಂದ್ರ ಆಪ್ತ ಪಿಎ ನೆಕ್ಕುಂಟಿ ನಾಗರಾಜ್ನನ್ನು ಸಹ ಎಸ್ಐಟಿ ಅರೆಸ್ಟ್ ಮಾಡಿದೆ. ಇನ್ನು ಈ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

Ad Widget . Ad Widget . Ad Widget . Ad Widget . Ad Widget . Ad Widget .

ಈ ಹೊತ್ತಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ನಾಗೇಂದ್ರ ಅವರನ್ನು ಕರೆಯಿಸಿಕೊಂಡು ಚರ್ಚಿಸಿದ್ದು, ಇಂದು ಸಂಜೆ ವೇಳೆಗೆ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನಿಡುವ ಎಲ್ಲಾ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ನಿನ್ನೆ (ಜೂನ್ 05) ರಾತ್ರಿ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಮಹತ್ವದ ಚರ್ಚೆ ಮಾಡಿದ್ದು, ಸಿಬಿಐಗೆ ಪ್ರಕರಣ ವರ್ಗಾವಣೆ ಆಗುತ್ತಿದ್ದಂತೆ ರಾಜೀನಾಮೆ ಪಡೆಯುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇರವಾಗಿ ನಾಗೇಂದ್ರ ಅವರಿಗೆ ಹೇಳಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಅನಿವಾರ್ಯತೆ ಎದುರಾಗಿದ್ದು, (ಜೂನ್ 06) ಮಧ್ಯಾಹ್ನದ ವೇಳೆಗೆ ರಾಜೀನಾಮೆ ನೀಡುವ ಸಾಧ್ಯತೆಗಳಿಗೆ ಎಂದು ಮೂಲಗಳಿಂದ ತಿಳಿದುಬಂದಿದೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *