ಹವಾಮಾನ ವರದಿ| ಜೂ.10ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಮುಂಗಾರು ಪ್ರವೇಶವಾಗಿದ್ದು ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ಜೂನ್​ 6ರಿಂದ 10ರವರೆಗೆ ಹಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

Ad Widget ... .. Ad Widget .

ಇನ್ನುಳಿದಂತೆ ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಯಾದಗಿರಿ, ಹಾವೇರಿ, ಧಾರವಾಡ, ಬೀದರ್​ನಲ್ಲಿ ಕೂಡ ಮಳೆಯಾಗಲಿದೆ.

Ad Widget

ಕಮಲಾಪುರ, ಸೇಡಬಾಳ, ಶಿರಹಟ್ಟಿ, ದೊಡ್ಡಬಳ್ಳಾಪುರ, ಚಿಕ್ಕೋಡಿ, ಕಲಬುರಗಿ, ಮಹಾಗೋವಾ, ಚಿಂತಾಮಣಿ, ಕೋಲಾರ, ಲಕ್ಷ್ಮೇಶ್ವರ, ರಬಕವಿ, ಸಂಕೇಶ್ವರ, ಶಿಗ್ಗಾಂವ್, ಹುಕ್ಕೇರಿ, ಭಾಲ್ಕಿ, ಅಫಜಲ್​ಪುರ, ಹುಕ್ಕೇರಿ, ಮಹಾಲಿಂಗಪುರ, ಬಾಗಲಕೋಟೆ, ಆಗುಂಬೆ, ಹೊನಕೆರೆ, ಹೊಸಕೋಟೆ, ಗೌರಿಬಿದನೂರಿನಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಸಂಜೆ ಮಳೆಯಾಗಿದೆ. ಇಂದು ಕೂಡ ಮೋಡಕವಿದ ವಾತಾವರಣವಿದ್ದು, ಸಂಜೆ ವೇಳೆ ಮಳೆಯಾಗುವ ನಿರೀಕ್ಷೆ ಇದೆ.

ಎಚ್​ಎಎಲ್​ನಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.4ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಗದಗದಲ್ಲಿ 29.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 29.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Leave a Comment

Your email address will not be published. Required fields are marked *