Ad Widget .

ಧಾರವಾಡದಲ್ಲಿ ಮಳೆ ಆರ್ಭಟ| ನಡುರಸ್ತೆಯಲ್ಲೇ ವೃದ್ಧನ ತಪಸ್ಸು…!

ಸಮಗ್ರ ನ್ಯೂಸ್: ಜಿಲ್ಲೆಯಾದ್ಯಂತ ಮಳೆ ಅಬ್ಬರ ಜೋರಾಗಿದ್ದು, ರಸ್ತೆಯಲ್ಲೆಲ್ಲ ನೀರು ನಿಂತು ಹೊಳೆಯಂತಾಗುತ್ತಿದೆ. ಇದರ ಮಧ್ಯೆ ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ಹಿರಿಯ ಜೀವಿಯೊಬ್ಬರು ಮಳೆ ಬರುವಾಗಲೇ ತಪಸ್ಸಿಗೆ ಕುಳಿತ ಘಟನೆ ನಡೆದಿದೆ.
.
ಧಾರವಾಡದಲ್ಲಿ ಜೋರಾಗಿ ಬರುತ್ತಿದ್ದ ಮಳೆಯಲ್ಲಿ ನಡು ರಸ್ತೆಯಲ್ಲಿಯೇ ಕಣ್ಣು ಮುಚ್ಚಿ ವೃದ್ಧರೊಬ್ಬರು ಕುಳಿತಿದ್ದಾರೆ. ಒಂಚೂರು ಅಲುಗಾಡದೆ ತಪಸ್ಸು ಮಾಡಿದ್ದಾರೆ. ಇನ್ನೂ ಈ ದೃಶ್ಯವನ್ನು ಓರ್ವ ಯುವಕನ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

Ad Widget . Ad Widget .

Leave a Comment

Your email address will not be published. Required fields are marked *