ಎಲೆಕ್ಟ್ರಾನಿಕ್ ಸಿಟಿ: ಕಿಲ್ಲರ್ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್‌ಗೆ ಅಕ್ಕ ತಮ್ಮ ಇಬ್ಬರು ಬಲಿಯಾಗಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ದೊಡ್ಡನಾಗಮಂಗಲದಲ್ಲಿ ನಡೆದಿದೆ. ವೇಗವಾಗಿ ಬಂದ ವಾಟರ್ ಟ್ಯಾಂಕರ್, ಬೈಕ್‌ಗೆ ಡಿಕ್ಕಿಯಾಗಿದ್ದರಿಂದ ಕಾಲೇಜಿಗೆ ಹೊರಟಿದ್ದ ಅಕ್ಕ-ತಮ್ಮ ಗಂಭೀರವಾಗಿ ಗಾಯಗೊಂಡು ಕೊನೆಯುಸಿರೆಳೆದಿದ್ದಾರೆ.

Ad Widget ... ..

ಮಧುಮಿತ (20), ರಂಜನ್(18) ಮೃತರು. ದೊಡ್ಡ ನಾಗಮಂಗಲದ ಕೆಂಪೇಗೌಡ ಬಡಾವಣೆ ನಿವಾಸಿಗಳಾದ ಇವರು ಬೆಂಗಳೂರಿನ ಎಸ್ಎಸ್ಎಂಆರ್‌ವಿ ಕಾಲೇಜಿನಲ್ಲಿ ಮಧುಮಿತ ವ್ಯಾಸಂಗ ಮಾಡುತ್ತಿದ್ದಳು. ಮೊದಲ ದಿನ ಅಕ್ಕನನ್ನು ಕಾಲೇಜಿಗೆ ಬಿಟ್ಟು ಬರಲು ತಮ್ಮ ಹೋಗಿದ್ದ. ಈ ವೇಳೆ ಕಿಲ್ಲರ್ ವಾಟರ್ ಟ್ಯಾಂಕರ್ ಇಬ್ಬರನ್ನೂ ಬಲಿ ಪಡೆದಿದೆ.

Ad Widget

ಬೈಕ್‌ ಮಿರರ್‌ಗೆ ವೇಗವಾಗಿ ಬಂದ ವಾಟರ್ ಟ್ಯಾಂಕರ್ ಡಿಕ್ಕಿಯಾಗುತ್ತಲೇ ಅಕ್ಕ-ತಮ್ಮ ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಅವರ ತಲೆ ಮೇಲೆ ಟ್ಯಾಂಕರ್ ಹಿಂಬದಿ ಚಕ್ರ‌ ಹರಿದು ದುರಂತ ಸಂಭವಿಸಿದೆ. ವಾಟರ್ ಟ್ಯಾಂಕರ್ ಚಾಲಕನ ಅತಿ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *