Ad Widget .

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲೋದಿಲ್ಲ – ಡಾ. ಪರಮೇಶ್ವರ್ ಜಿ.

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗಳಿಸದೆ ಹೋಗಿದ್ದರಿಂದ ಇದೀಗ ಕಾಂಗ್ರೆಸ್ ನಾಯಕರೇ ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ವಿಚಾರದ ಕುರಿತು ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

Ad Widget . Ad Widget .

ಇನ್ನೂ ಈ ವಿಚಾರದ ಕುರಿತಾಗಿ ಬೆಂಗಳೂರಿನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಕರ್ನಾಟಕ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

Ad Widget . Ad Widget .

ಕರ್ನಾಟಕ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜಕೀಯ ದೃಷ್ಟಿಕೋನದಿಂದ ಗ್ಯಾರಂಟಿ ಯೋಜನೆ ಜಾರಿ ಮಾಡಿಲ್ಲ ಗ್ಯಾರಂಟಿ ಯೋಜನೆ ಜಾರಿಯಿಂದ ಪಕ್ಷಕ್ಕೆ ಲಾಭವಾಗಬಹುದು ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲವೆಂದು ನಾವು ಸ್ಪಷ್ಟಪಡಿಸಿದ್ದೇವೆ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಸೀಟ್ ಬಂದಿದೆ ಎಂದು ಗ್ಯಾರೆಂಟಿ ನಿಲ್ಲಿಸಲ್ಲ ಕಾಂಗ್ರೆಸ್ ಗೆ ಕಡಿಮೆ ಸ್ಥಾನ ಬಂದಿದೆ ಎಂದು ಗ್ಯಾರಂಟಿ ನಿಲ್ಲಿಸುವುದಿಲ್ಲ ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲಿದೆ ಎಂದು ತಿಳಿಸಿದರು.

Leave a Comment

Your email address will not be published. Required fields are marked *