ಗುಜರಿ ಗೋಡೌನ್‌ನಲ್ಲಿ ಅನಿಲ ಸೋರಿಕೆ‌| 30 ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಮೈಸೂರಿನಲ್ಲಿ ಗುಜರಿಯ ಗೋಡೌನ್‌ನಲ್ಲಿ ವಿಷಕಾರಿ ಅನಿಲ ಸೋರಿಕೆ‌ಯಿಂದಾಗಿ 30 ಮಂದಿ ಅಸ್ವಸ್ಥಗೊಂಡ ಘಟನೆ ಸಂಭವಿಸಿದೆ. ಮೈಸೂರಿನ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ಗುಜರಿ ಅಂಗಡಿಯಲ್ಲಿ ಈ ಸಮಸ್ಯೆ ಉಂಟಾಗಿದ್ದು, ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಐವರು ಅಸ್ವಸ್ಥಗೊಂಡು ಬಳಿಕ ಸುತ್ತಲಿನ ಗ್ರಾಮಸ್ಥರೂ ಆರೋಗ್ಯ ಸಮಸ್ಯೆ ಎದುರಿಸಿ ಆಸ್ಪತ್ರೆ ಸೇರಿದ್ದಾರೆ.

Ad Widget ... ..

ಸಂಜೆ ವಿಷಾನಿಲ ಸೋರಿಕೆಯಾಗಿತ್ತು. ಮೊದಲು ಗುಜರಿ ಗೋಡೌನ್ನಲ್ಲಿ ಕೆಲಸ ಮಾಡುತ್ತಿದ್ದವರು ಅಸ್ವಸ್ಥಗೊಂಡರು ನಂತರ ಅನಿಲ ಗೋಡೌನ್ನಿಂದ ಹೊರಕ್ಕೆ ಬಂದು ಕೆಸರೆ ಗ್ರಾಮದಲ್ಲಿ ಹರಡಿದೆ. ಇದರಿಂದ ಗ್ರಾಮಸ್ಥರಿಗೆ ಕೆಮ್ಮು, ವಾಂತಿ ಶುರುವಾಗಿದೆ. ಇವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಅಸ್ವಸ್ಥಗೊಂಡಿರುವ 30 ಮಂದಿಯಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಎನ್.ಆರ್ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೋಲಿಸರು ಹಾಗೂ ಆರೋಗ್ಯಾಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ.

Ad Widget

Leave a Comment

Your email address will not be published. Required fields are marked *