Ad Widget .

‘ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲೇಬಾರದು, ಆಡಿದರೂ ಹೀನಾಯವಾಗಿ ಸೋಲಿಸಬೇಕು’ – ಯು.ಟಿ ಖಾದರ್

ಸಮಗ್ರ ನ್ಯೂಸ್: ‘ನಾವು ಪಾಕಿಸ್ತಾನದ ಜೊತೆ ಕ್ರಿಕೆಟ್ ಆಟ ಆಡಲೇಬಾರದು. ಪಾಕಿಸ್ತಾನದವರು ಇಲ್ಲಿ ಬಂದಾಗ ವಿರೋಧಿಸಿದ್ದನ್ನು ನೋಡಿದ್ದೇವೆ. ಭಾರತ ದೇಶದಲ್ಲಿ ಅವರ ಜತೆ ಪಂದ್ಯ ಬ್ಯಾನ್ ಮಾಡಲಾಗಿದೆ. ಹಾಗಾದ ಮೇಲೆ ಹೊರದೇಶದಲ್ಲಿ ಯಾಕೆ ಆಟ ಆಡಿಸಬೇಕು? ಅವರು ಸರಿಯಾಗುವ ತನಕ‌ ಅವರ ಜತೆ ಪಂದ್ಯ ಆಡುವುದೇ ಬೇಡ. ಇದು ನನ್ನ ವೈಯಕ್ತಿಕ ಅಂತರಾಳದ ಅನಿಸಿಕೆ’, ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.

Ad Widget . Ad Widget .

ಮಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವೇಳೆ ಬಾಂಧವ್ಯ ಸರಿಯಾಗಿದ್ದರೆ ಮತ್ತೆ ನಮ್ಮಲ್ಲಿ ಯಾಕೆ ಆಡುವುದಿಲ್ಲ? ಮ್ಯಾಚ್ ಆಯೋಜಿಸುವವರು ಈ ರೀತಿಯ ಗೊಂದಲ ಮಾಡಬಾರದು. ಈಗ ಆಟ ಆಡಲೇಬೇಕು ಎಂದು ನಿರ್ಧಾರವಾಗಿದೆ. ಭಾರತ ದೇಶ ಟಿ20 ವಿಶ್ವಕಪ್ ಗೆಲ್ಲಬೇಕು ಎಂದು ಅವರು ಆಶಿಸಿದರು.

Ad Widget . Ad Widget .

ನಾಳೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ನಮ್ಮ ಗೆಲವು ಕೇವಲ ಜಯವಷ್ಟೇ ಆಗಬಾರದು. ಅದು ಗೌರವದ ಗೆಲುವಾಗಬೇಕು. ಪಾಕಿಸ್ತಾನವನ್ನು ಸೋಲಿಸುವುದು ಮಾತ್ರವಲ್ಲ, ಅವರನ್ನು ಹೀನಾಯವಾಗಿ ಸೋಲಿಸಬೇಕು ಎಂದು ಖಾದರ್ ಹೇಳಿದರು.

Leave a Comment

Your email address will not be published. Required fields are marked *