‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…!

ಸಮಗ್ರ ನ್ಯೂಸ್: ಇಂದು ನರೇಂದ್ರ ಮೋದಿ ಅವರು ಸಂಜೆ 7.15ಕ್ಕೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಸಂಸದರು ಮೋದಿ ಸಂಪುಟದ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಹೀಗಾಗಿ ಸಚಿವರಾಗುವ ಸಂಸದರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕದ ಐವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಕ್ಕಿದೆ ಎಂದು ತಿಳಿದುಬಂದಿದೆ.

Ad Widget ... ..

ಮುಖ್ಯವಾಗಿ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್, ಎಚ್.ಡಿ ಕುಮಾರಸ್ವಾಮಿಗೆ ಈ ಬಾರಿ ಮೋದಿ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ದೊರೆತಿದೆ.

Ad Widget

ಸಚಿವ ಸ್ಥಾನ ಸಿಕ್ಕ ಕೂಡಲೇ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದು ಬೆಳಿಗ್ಗೆ 11 ಗಂಟೆಗೆ ನನಗೆ ಪ್ರಧಾನಿ ಕಚೇರಿಯಿಂದ ಕರೆ ಬಂದಿದೆ. ಅಲ್ಲಿಗೆ ಹೋದಾಗ ಮಂತ್ರಿ ಸ್ಥಾನ ಫಿಕ್ಸ್ ಆಗಿದ್ದು ಗೊತ್ತಾಯಿತು. ಹೈಕಮಾಂಡ್ ಏನು ಜವಾಬ್ದಾರಿ ಕೊಡುತ್ತಾರೆ ಅದನ್ನು ನಿಭಾಯಿಸುತ್ತೇನೆ. ಇನ್ನೂ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದರು.

Leave a Comment

Your email address will not be published. Required fields are marked *