ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ/ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು

ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಆವಾಸ್‌ ಯೋಜನೆ (ಪಿಎಂಎವೈ) ಅಡಿಯಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ಒದಗಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ದೇಶದ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ.

Ad Widget ... ..

ಪಿಎಂಎವೈ ಯೋಜನೆಗೆ ಅರ್ಹ ಕುಟುಂಬಗಳ ಸಂಖ್ಯೆ ಹೆಚ್ಚಾಗಿರುವುದನ್ನು ಪರಿಗಣಿಸಿ, ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣಕ್ಕೆ ಅಗತ್ಯ ನೆರವು ನೀಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ನೆರವು ನೀಡುವ ಪಿಎಂಎವೈ ಯೋಜನೆಯನ್ನು ಕೇಂದ್ರ ಸರ್ಕಾರವು 2015- 16ರಲ್ಲಿ ಜಾರಿಗೊಳಿಸಿದೆ. ಈ ಯೋಜನೆ ಅಡಿಯಲ್ಲಿ, ಇದುವರೆಗೆ 4.21 ಕೋಟಿ ಮನೆಗಳು ನಿರ್ಮಾಣವಾಗಿವೆ.

Leave a Comment

Your email address will not be published. Required fields are marked *