Ad Widget .

ನೆಹರು ಬಳಿಕ ಮೂರನೇ ಬಾರಿ ಪ್ರಧಾನಿಯಾದ ನಮೋ| ಇಂದಿನಿಂದ ಮೋದಿ 3.0 ಶಕೆ ಆರಂಭ

ಸಮಗ್ರ ನ್ಯೂಸ್: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

Ad Widget . Ad Widget .

ನೆಹರು ಮೊದಲ ಬಾರಿಗೆ ನೇಮಕವಾಗಿದ್ದು, ನಂತರ ಎರಡು ಬಾರಿ ಚುನಾಯಿತರಾಗಿದ್ದರು. ಮೋದಿ ಸತತ ಮೂರು ಬಾರಿಗೆ ಚುನಾಯಿತರಾಗಿ ಪ್ರಧಾನಿ ಹುದ್ದೆಗೇರಿದ್ದಾರೆ.

Ad Widget . Ad Widget .

ಈಶ್ವರನ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರೊಂದಿಗೆ 72 ಸಚಿವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶ ವಿದೇಶಗಳ ಗಣ್ಯರು ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಪೇಜಾವರ ಶ್ರಿಗಳು, ಚಿನ್ನಜೀಯರ್ ಸ್ವಾಮಿಜಿ ಸೇರಿದಂತೆ ವಿವಿಧ ಸಾಧು ಸಂತರು, ಮಠಾಧೀಶರು ಕೂಡ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದ್ದರು.

ಉಪ ರಾಷ್ಟ್ರಪತಿ ಜಗದೀಪ್ ಧನಕರ್, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ನೇಪಾಳಿ ಪ್ರಧಾನಿ ಪುಷ್ಪ ಕಮಲ್ ದಹಲ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಸೆಶೆಲ್ಸ್ ಉಪಾಧ್ಯಕ್ಷ ಅಹ್ಮದ್ ಅಫೀಫ್ ಅವರು ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಿದ್ದರು.

ಕರ್ನಾಟಕದಿಂದ ಐವರು ಸಚಿವರಾಗಿ ಮೋದಿ ಸಂಪುಟ ಸೇರಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಹುಬ್ಬಳ್ಳಿ- ಧಾರವಾಡ ಸಂಸದ ಪ್ರಹ್ಲಾದ ಜೋಶಿ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಾಂದ್ಲಾಜೆ, ತುಮಕೂರು ಸಂಸದ ವಿ.ಸೋಮಣ್ಣ ಮತ್ತು ಮಂಡ್ಯ ಜೆಡಿಎಸ್ ಸಂಸದ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Leave a Comment

Your email address will not be published. Required fields are marked *