Ad Widget .

ಬೆಳ್ಳಾರೆ: ತಲೆಗೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಕೊಲೆ!!

ಸಮಗ್ರ ನ್ಯೂಸ್: ತಲೆಗೆ ಕಲ್ಲನ್ನು ಎತ್ತಿಹಾಕಿ‌ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಸುಳ್ಯ ತಾಲೂಕಿನ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. ಮೃತ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ಗುರುತಿಸಲಾಗಿದೆ.

Ad Widget . Ad Widget .

ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ. ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.

Ad Widget . Ad Widget .

ಜೂ.10ರ ಮುಂಜಾನೆ ಪ್ರಕರಣ‌ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಬೆಳ್ಳಾರೆ ಠಾಣಾಧಿಕಾರಿ ಸಂತೋಷ್ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯದ ಮಾಹಿತಿಯಂತೆ ಕೊಲೆಯ ಕಾರಣ ಮತ್ತು ಕೊಲೆಗೈದಾತನ ವಿಚಾರ ತಿಳಿದುಬಂದಿಲ್ಲ.

Leave a Comment

Your email address will not be published. Required fields are marked *