Ad Widget .

ಪ್ರಜ್ವಲ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ.. ಪರಪ್ಪನ ಅಗ್ರಹಾರಕ್ಕೆ ಶಿಫ್ಟ್‌

ಸಮಗ್ರ ನ್ಯೂಸ್: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಡಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಇದೀಗ ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇಷ್ಟರವರೆಗೆ ಅಂದರೆ 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ, ಇದೀಗ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ.

Ad Widget . Ad Widget .

ಇಂದು ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ನಂತರ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದೆ ನ್ಯಾಯಾಧೀಶರು ಆರೋಪಿಗೆ 14 ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ವಿಚಾರಣೆ ವೇಳೆ ಪೊಲೀಸರಿಂದ ತೊಂದರೆ ಆಯ್ತಾ ಎಂದು ಪ್ರಜ್ವಲ್‌ಗೆ ಜಡ್ಜ್ ಪ್ರಶ್ನೆ ಕೇಳಿದ್ದು, ಇದಕ್ಕೆ ಏನೂ ತೊಂದರೆ ಆಗಿಲ್ಲ ಸ್ವಾಮಿ ಎಂದು ಉತ್ತರಿಸಿದ್ದಾರೆ. ನಂತರ ಎಸ್ಐಟಿಯಿಂದ ಮೆಡಿಕಲ್‌ ಟೆಸ್ಟ್ ಹಾಗೂ ಇನ್ನಿತರ ಮಾಹಿತಿ ಪಡೆದು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಸೂಚಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *