Ad Widget .

ಯುವ ದಾಂಪತ್ಯದಲ್ಲಿ ಬಿರುಕು… ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಜ್ ಕುಟುಂಬದ ಕುಡಿ…

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ವಿಚಾರದ ಬೆನ್ನಲ್ಲೇ ಇದೀಗ ಮತ್ತೊಂದು ಜೋಡಿಯು ವಿಚ್ಛೇದನಕ್ಕೆ ಮುಂದಾಗಿದೆ. ಹೌದು ರಾಜ್ ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ.

Ad Widget . Ad Widget .

ಯುವ ಹಾಗೂ ಶ್ರೀದೇವಿ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹ ಆಗಿದ್ದರು. ಅನೇಕ ಸೆಲೆಬ್ರಿಟಿಗಳು ಇವರ ವಿವಾಹದಲ್ಲಿ ಭಾಗಿ ಆಗಿದ್ದರು. ಮದುವೆ ಬಳಿಕ ರಾಜ್ ಕುಮಾರ್ ಅಕಾಡೆಮಿಯನ್ನು ಶ್ರೀದೇವಿ ನಡೆಸಿಕೊಂಡು ಹೋಗುತ್ತಿದ್ದರು. ಈಗ ಇವರ ಮಧ್ಯೆ ಮನಸ್ತಾಪ ಉಂಟಾಗಿದ್ದು ಬೇರಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಪತ್ನಿಯಿಂದ ಅಗೌರವ ಹಾಗೂ ಮಾನಸಿಕ ಕ್ರೌರ್ಯ ಉಂಟಾಗಿದೆ ಎಂದು ಯುವ ವಿಚ್ಛೇದನ ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಸದ್ಯ ಸಮನ್ಸ್ ಜಾರಿ ಮಾಡಿ ಜುಲೈ 4ಕ್ಕೆ ಪ್ರಕರಣ ಮುಂದೂಡಲಾಗಿದೆ. ಸದ್ಯ ಶ್ರೀದೇವಿ ಅಮೆರಿಕದಲ್ಲಿ ಇದ್ದಾರೆ ಎನ್ನಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *