ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸುವ ಶಕ್ತಿ ಯೊಜನೆ ಒಂದು ವರ್ಷ ಪೂರೈಸಿದೆ. ಯೋಜನೆ ಅಡಿಯಲ್ಲ ಜೂನ್ 9 ರವರೆಗೆ 225.15 ಕೋಟಿ ಮಹಿಳಾ ಪ್ರಯಾಣಿಕರು ಲಾಭ ಪಡೆದಿದ್ದಾರೆ.
ಕಳೆದೊಂದು ವರ್ಷದಲ್ಲಿ 225.15 ಕೋಟಿ ಮಹಿಳಾ ಪ್ರಯಾಣಿಕರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳಲ್ಲೂ ಉಚಿ ಪ್ರಯಾಣ ಮಾಡಿದ್ದಾರೆ. ಈ ಮೂಲಕ ಜೂ.9 ರವರೆಗೆ ಒಟ್ಟು5481.40 ಕೋಟಿ ರೂ.ಗಳನ್ನು ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಗಾಗಿ ಬಜೆಟ್ ನಲ್ಲಿ ಸುಮಾರು ₹5,500 ಕೋಟಿ ಮೀಸಲಿಟ್ಟಿದ್ದಾರೆ. ಶಕ್ತಿ ಯೋಜನೆಗೆ ಯಾವುದೇ ಸಮಸ್ಯೆ ಇಲ್ಲ. ನಮ್ಮ ಕಾಂಗ್ರೆಸ್ ಸರ್ಕಾರ ಇರುವವರೆಗೂ ಶಕ್ತಿ ಯೋಜನೆ ಇರುತ್ತೆ. ಯಾರಿಗೂ ಅನುಮಾನ ಬೇಡ. ಮುಂದೆಯೂ ಸಹ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಆಗಲೂ ಶಕ್ತಿ ಯೋಜನೆ ಇರುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.