Ad Widget .

ಯುವ ರಾಜ್‌ಕುಮಾರ್‌ಗೆ ನಟಿ ಸಪ್ತಮಿ ಗೌಡ ಜತೆ ಸಂಬಂಧ: ಪತ್ನಿ ಆರೋಪ

ಸಮಗ್ರ ನ್ಯೂಸ್ : ಡಾ.ರಾಜ್‌ಕುಮಾರ್‌ ವಂಶದಲ್ಲಿ ವಿಚ್ಛೇದನ ಇದೇ ಮೊದಲು ಕೇಳಿ ಬಂದಿದ್ದು, ನಟ ಯುವ ರಾಜ್‌ಕುಮಾರ್‌ ಅವರ ಪತ್ನಿ ಶ್ರೀದೇವಿ ಭೈರಪ್ಪ ಅವರಿಗೆ ಡಿವೋರ್ಸ್ ನೋಟಿಸ್‌ ನೀಡಿದ ಬಳಿಕ ಇಬ್ಬರ ನಡುವಿನ ಆರೋಪಗಳು ಜಾಸ್ತಿಯಾಗಿವೆ. ಅದರಲ್ಲೂ, ಅನೈತಿಕ ಸಂಬಂಧಗಳ ಆರೋಪಗಳು ಇನ್ನೂ ಹೆಚ್ಚಾಗಿವೆ.

Ad Widget . Ad Widget .

ಹೌದು “ಶ್ರೀದೇವಿ ಭೈರಪ್ಪ ಅವರು ರಾಧಯ್ಯ ಎಂಬ ವ್ಯಕ್ತಿ ಜತೆ ಅನೈತಿಕ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಯುವ ರಾಜ್‌ಕುಮಾರ್‌ ಪರ ವಕೀಲ ಸಿರಿಲ್‌ ಪ್ರಸಾದ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಇನ್ನು, ನಟನ ಲೀಗಲ್‌ ನೋಟಿಸ್‌ಗೆ ಉತ್ತರಿಸಿದ ಶ್ರೀದೇವಿ ಭೈರಪ್ಪ, “ಯುವ ರಾಜ್‌ಕುಮಾರ್‌ ನಟಿ ಸಪ್ತಮಿ ಗೌಡ ಜತೆ ಸಂಬಂಧ ಹೊಂದಿದ್ದಾರೆ” ಎಂಬುದಾಗಿ ಆರೋಪಿಸಿದ್ದಾರೆ.

Ad Widget . Ad Widget .

ಮೇ 30ರಂದು ಶ್ರೀದೇವಿ ಭೈರಪ್ಪ ಅವರು ರಿಪ್ಲೈ ನೋಟಿಸ್‌ ನೀಡಿದ್ದರು ಅದರಲ್ಲಿ “ಸಪ್ತಮಿ ಗೌಡ ಜತೆಗೆ ಯುವ ರಾಜ್‌ಕುಮಾರ್‌ ಒಂದು ವರ್ಷದಿಂದ ಸಂಬಂಧ ಹೊಂದಿದ್ದಾರೆ. ಇದೇ ಕಾರಣಕ್ಕಾಗಿ ನನ್ನನ್ನು ಮನೆಯಿಂದ ಹೊರಹಾಕಲು ಪ್ರಯತ್ನಿಸಿದರು. ಪ್ರೀತಿಸಿ ಮದುವೆಯಾದ ಯುವ ರಾಜ್‌ಕುಮಾರ್‌, ಬಳಿಕ ಸಪ್ತಮಿ ಗೌಡ ಹಿಂದೆ ಬಿದ್ದಿದ್ದಾರೆ” ನಟಿಯನ್ನು ಮನೆಗೆ ಕರೆದುಕೊಂಡು ಬರುತ್ತಿದ್ದರು. ಸಪ್ತಮಿ ಗೌಡ ಜತೆ ಹೋಟೆಲ್‌ನಲ್ಲಿ ಇರುವಾಗಲೇ ಯುವ ಸಿಕ್ಕಿಬಿದ್ದಿದ್ದರು. ಸಂಬಂಧ ಗೊತ್ತಾದ ಮೇಲೆ ನನ್ನ ಮೇಲೆ ಆರೋಪ ಮಾಡಲು ಶುರುವಿಟ್ಟುಕೊಂಡರು” ಎಂಬುದಾಗಿ ಶ್ರೀದೇವಿ ಭೈರಪ್ಪ ಆರೋಪಿಸಿದ್ದಾರೆ.

ಯುವ ಪರ ವಕೀಲರ ಹೇಳಿದ್ದು:
ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆಧಾರದ ಮೇಲೆ ನಾವು ಒಟ್ಟು 54 ಪೇಜಿನ ಡಿವೋರ್ಸ್ ಪಿಟೀಷನ್ ಹಾಕಿದ್ದೇವೆ. ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅದರಂತೆ, ಇವರು ನೋಟಿಸ್‌ ಜಾರಿಗೊಳಿಸಲಾಗಿದೆ. ಶ್ರೀದೇವಿ ಭೈರಪ್ಪ ಅವರಿಗೆ ರಾಧಯ್ಯ ಎಂಬ ವ್ಯಕ್ತಿ ಜತೆ ಅಕ್ರಮ ಸಂಬಂಧ ಇದೆ. ಇದರಿಂದಾಗಿ ಕಳೆದ ಎರಡು ವರ್ಷಗಳಿಂದ ಯುವ ಹಾಗೂ ಶ್ರೀದೇವಿ ನಡುವಿನ ಸಂಬಂಧ ಹಾಳಾಗಿದೆ.

“ನಾನು ಅಮೆರಿಕದಲ್ಲಿ ಇರುತ್ತೇನೆ, ನೀನು ಬೆಂಗಳೂರಿನಲ್ಲಿಯೇ ಇರು ಎಂಬುದಾಗಿ ಕಿರುಕುಳ ಕೊಟ್ಟಿದ್ದಾರೆ. ಒಂದು ತಿಂಗಳ ಹಿಂದೆ ರಾಧಯ್ಯನಿಗೆ ಮದುವೆ ಆಗಿದೆ. ಆ ಸಮಯದಲ್ಲಿ ಆಕೆ ಬಹಳ ಖಿನ್ನತೆಗೆ ಜಾರಿದ್ದರು. ಇದಕ್ಕೆ ಈಗ ಯುವನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ದೈಹಿಕವಾಗಿ ಸಂಪರ್ಕಿಸಲು ಹೋದಾಗ ಅವಮಾನ ಮಾಡುತ್ತಿದ್ದರು. ಹಲ್ಲುಜ್ಜಿಕೊಂಡು ಬಾ, ಸ್ನಾನ ಮಾಡು ಅಂತ ಹೇಳುತ್ತಿದ್ದರು. ನೀನು ದೈಹಿಕವಾಗಿ ಫಿಟ್‌ ಇಲ್ಲ, ರಾಧಯ್ಯ ಫಿಟ್‌ ಇದ್ದಾನೆ ಎಂದು ಅವಮಾನ ಮಾಡುತ್ತಿದ್ದರು. ರಾಧಯ್ಯನ ಹೆಂಡತಿ ಮನೆಯಲ್ಲಿ ಇದ್ದಿದ್ದಾಗ ಆತನ ಮನೆಗೆ ಹೋಗುತ್ತಾರೆ. ಈ ರೀತಿಯ ಸಂಬಂಧ ಇಟ್ಟುಕೊಂಡಿದ್ದಾರೆ” ಎಂಬುದಾಗಿ ತಿಳಿಸಿದರು.

Leave a Comment

Your email address will not be published. Required fields are marked *