ಬೆಳಗಾವಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್‌ ಎಂದು ಕೂಗಿದ ವಿಚಾರಣಾಧೀನ ಖೈದಿ

ಸಮಗ್ರ ನ್ಯೂಸ್: ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲೇ ನಟೋರಿಯಸ್​ ಕ್ರಿಮಿನಲ್ ಒಬ್ಬ ಪಾಕಿಸ್ತಾನ ಪರ ಘೋಷಣೆ ಕೂಗಿದ ಘಟನೆ ನಡೆದಿದೆ. ಆತನ ಕುಕೃತ್ಯದಿಂದ ಕೋಪಗೊಂಡ ಸ್ಥಳದಲ್ಲಿದ್ದವರು ಧರ್ಮದೇಟು ಕೊಟ್ಟಿದ್ದಾರೆ. ಪೊಲೀಸರ ಆತನನ್ನು ರಕ್ಷಿಸಿ ಮತ್ತೆ ಜೈಲಿಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ.

. Ad Widget . Ad Widget . Ad Widget

ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದು, ಆತ ಘೋಷಣೆ ಕೂಗುತ್ತಿದ್ದಂತೆ ವಕೀಲರು, ಸಾರ್ವಜನಿಕರಿಂದ ಪೆಟ್ಟು ಬಿದ್ದಿದೆ. ಕೋರ್ಟ್ ಒಳ ಭಾಗದಲ್ಲೇ ಆತನಿಗೆ ಪೆಟ್ಟಿ ಬಿದ್ದಿದೆ. ಏಟು ಬೀಳುತ್ತಿದ್ದಂತೆ ಆರೋಪಿಯನ್ನು ರಕ್ಷಣೆ ಮಾಡಿ ಹೊರ ಕರೆದುಕೊಂಡು ಬಂದ ಪೊಲೀಸರು. ಅಲ್ಲಿಂದ ಎಪಿಎಂಸಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

. Ad Widget .

ಜಯೇಶ್ ಪೂಜಾರ್​​ ಈ ಹಿಂದೆ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಗೆ ಜೈಲಿನಿಂದ ಜೀವ ಬೆದರಿಕೆ ಹಾಕಿದ್ದ. ಹಿಂಡಲಗಾ ಜೈಲಿನಲ್ಲಿದ್ದುಕೊಂಡು ಜೀವ ಬೆದರಿಕೆ ಹಾಕಿದ್ದ. ಈ ಕೇಸ್ ಹಿನ್ನೆಲೆಯಲ್ಲಿ ಕೋರ್ಟ್ ಗೆ ಕರೆ ತರಲಾಗಿತ್ತು. ಆರೋಪಿ ಜಯೇಶ್​ ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೂ ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದ. ಕೋರ್ಟ್ ನಲ್ಲಿ ತನ್ನ ಅಹವಾಲು ಸ್ವೀಕರಿಸುತ್ತಿಲ್ಲ ಅಂತಾ ಪಾಕ್ ಪರ ಘೋಷಣೆ ಕೂಗಿರುವುದಾಗಿ ಆತ ಹೇಳಿದ್ದಾನೆ.

Leave a Comment

Your email address will not be published. Required fields are marked *