Ad Widget .

‘ದರ್ಶನ್ ಗಿಂತ ನಾನೇನು ಕಡಿಮೆ?ಬಾ…’| ಪವಿತ್ರಾಗೆ ಆ ಫೋಟೋ ಕಳಿಸಿದ್ನಂತೆ ರೇಣುಕಾಸ್ವಾಮಿ!!

ಸಮಗ್ರ ನ್ಯೂಸ್: ರೇಣುಕಾ ಸ್ವಾಮಿ ಎಂಬುವರನ್ನು ಕ್ರೂರವಾಗಿ ಕೊಲೆ ಮಾಡಿರುವ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್, ಪ್ರಕರಣದಲ್ಲಿ ಮೊತ್ತೊಂದು ವಿಚಾರ ಬೆಳಕಿಗೆ ಬಂದಿದೆ. ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿರುವ ಜತೆಗೆ ಕಳೆದ ಶುಕ್ರವಾರ ಮರ್ಮಾಂಗದ ಫೋಟೊ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿರುವುದಾಗಿ ವರದಿಯಾಗಿದೆ.

Ad Widget . Ad Widget .

ಪವಿತ್ರಾ ಗೌಡ ಹಾಗೂ ದರ್ಶನ್‌ ನಡುವೆ ಇರುವ ಗಾಸಿಪ್‌ ಹೊಸದೇನಲ್ಲ. ಈ ಮುಂಚೆ ದರ್ಶನ್‌ ಪತ್ನಿ ಹಾಗೂ ಪವಿತ್ರಾ ಗೌಡ ಅವರ ನಡುವೆ ಸೋಷಿಯಲ್‌ ಮೀಡಿಯಾ ವಾರ್‌ ಕೂಡ ನಡೆದಿತ್ತು. ಇದೀಗ ದರ್ಶನ್‌ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ದರ್ಶನ್​ಗೆ ಸಹಾಯ ಮಾಡಿದ ಎಲ್ಲರೂ ಈಗ ಜೈಲು ಸೇರಿದ್ದಾರೆ.

Ad Widget . Ad Widget .

ದರ್ಶನ್ ಹಾಗೂ ವಿಜಯಲಕ್ಷ್ಮಿ ಸಂಸಾರ ಚೆನ್ನಾಗಿರಬೇಕು ಎಂದು ಬಯಸಿದ ರೇಣುಕಾಸ್ವಾಮಿ ಅವರು ಪವಿತ್ರಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಅಷ್ಟೇ ಅಲ್ಲದೇ ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ.

ಈ ಕುರಿತಂತೆ ಮಾಧ್ಯಮವೊಂದು ವರದಿ ಮಾಡಿದ್ದು, ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಜತೆಗೆ ಪವನ್‌ಗೂ ಕೂಡ ʻದರ್ಶನ್‌ಗೆ ಈ ವಿಷಯ ಹೇಳಬೇಡಿ. ದರ್ಶನ್‌ ಏನಾದ್ರು ಮಾಡಿಬಿಡ್ತಾನೆʼ ಎಂದು ಪವಿತ್ರಾ ಹೇಳಿದ್ದರು. ಆದರೆ ಪವನ್‌ ಈ ವಿಚಾರ ದರ್ಶನ್‌ ಅವರಿಗೆ ಹೇಳಿದ್ದಾರೆ. ದರ್ಶನ್ ಹಾಗೂ ಗ್ಯಾಂಗ್ ರೇಣುಕಾ ಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

Leave a Comment

Your email address will not be published. Required fields are marked *