Ad Widget .

HSPR ನಂಬರ್ ಪ್ಲೇಟ್ ಅಳವಡಿಕೆ ಅವಧಿ ಮತ್ತೆ ವಿಸ್ತರಣೆಗೆ ಹೈಕೋರ್ಟ್ ಸಮ್ಮತಿ| ಜು.4ಕ್ಕೆ ವಿಚಾರಣೆ ಮುಂದೂಡಿಕೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ವಾಹನಗಳಿಗೆ ಅತಿಸುರಕ್ಷಿತ ನೋಂದಣಿ ಫಲಕ (HSRP) ಅಳವಡಿಸಲು ಆಗಸ್ಟ್‌ ಅಥವಾ ಸೆಪ್ಟೆಂಬರ್‌ವರೆಗೆ ಗಡುವು ವಿಸ್ತರಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಬುಧವಾರ ಅನುಮತಿ ನೀಡಿದೆ.

Ad Widget . Ad Widget .

HSRP ಅಳವಡಿಕೆಗೆ ವಿಧಿಸಲಾಗಿರುವ ಗಡುವು ವಿಸ್ತರಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಬಿಎನ್‌ಡಿ ಎನರ್ಜಿ ಲಿಮಿಟೆಡ್‌ ಮತ್ತಿತರರು ಸಲ್ಲಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರಿದ್ದ ವಿಭಾಗೀಯ ಪೀಠ ಬುಧವಾರ ನಡೆಸಿತು.

Ad Widget . Ad Widget .

“ಹೈಕೋರ್ಟ್‌ನ ರಜಾಕಾಲೀನ ಪೀಠವು ಮೇ 21ರಂದು HSRP ಅಳವಡಿಸದಿರುವುದಕ್ಕೆ ಅರ್ಜಿದಾರರ ವಿರುದ್ಧ ಯಾವುದೇ ಕ್ರಮಕೈಗೊಳ್ಳಬಾರದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಈಗ ರಾಜ್ಯ ಸರ್ಕಾರವು ಆಗಸ್ಟ್‌-ಸೆಪ್ಟೆಂಬರ್‌ವರೆಗೆ HSRP ಅಳವಡಿಕೆ ಗಡುವು ವಿಸ್ತರಿಸಲಾಗುವುದು ಎಂದು ತಿಳಿಸಿದೆ. ಹೀಗಾಗಿ, ಮೇ 21ರ ಆದೇಶದಲ್ಲಿ ಮಾರ್ಪಾಡು ಮಾಡಲಾಗಿದೆ” ಎಂದು ನ್ಯಾಯಾಲಯವು ಆದೇಶ ಮಾಡಿದೆ.

Leave a Comment

Your email address will not be published. Required fields are marked *