Ad Widget .

ಕೊಲೆಯಾದ ರೇಣುಕಾಸ್ವಾಮಿ ಯಾರು..? ಪವಿತ್ರ ಗೌಡ ದರ್ಶನ್ ಲೈಫ್ ನಲ್ಲಿ ಬಂದಿದ್ದಕ್ಕೆ ನಡೆಯಿತಾ ಕೊಲೆ..!

ಸಮಗ್ರ ನ್ಯೂಸ್: ನಟ ದರ್ಶನ್ ಅವರನ್ನು ಮೈಸೂರಿನ ರ‍್ಯಾಡಿಸನ್ ಹೋಟೆಲ್ನಲ್ಲಿ ಬಂಧನ ಮಾಡಲಾಗಿದೆ. ಈ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೂ ದರ್ಶನ್ಗೂ ನಂಟಿದೆ ಎನ್ನಲಾಗಿದೆ. ಈ ರೇಣುಕಾಸ್ವಾಮಿ ಯಾರು? ಅವರಿಗೂ ಪವಿತ್ರಾ ಗೌಡಗೂ ಏನು ಸಂಬಂಧ? ಕೊಲೆಗೆ ಕಾರಣವೇನು ಇದೆಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ

Ad Widget . Ad Widget .

ರೇಣುಕಾಸ್ವಾಮಿ ಚಿತ್ರದುರ್ಗದ ಮೂಲದವರು ಅವರು ಅಪೊಲೋ ಮೆಡಿಕಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮನೆಯಿಂದ ಹೊರಟವರು ವಾಪಸ್ ಬಂದಿಲ್ಲ. ಬಳಿಕ ರೇಣುಕಾಸ್ವಾಮಿ ಶವವಾಗಿ ಪತ್ತೆ ಆಗಿರುವುದಾಗಿ ಕುಟುಂಬದವರಿಗೆ ಪೊಲೀಸರು ಮಾಹಿತಿ ನೀಡಿದರು. ರೇಣುಕಾಸ್ವಾಮಿ ಹಾಗೂ ಸಹನಾ 2023ರ ಜೂನ್‌ 28ರಂದು ಮದುವೆಯಾಗಿದ್ದರು. ಇನ್ನೇನು ಕೆಲವೇ ದಿನಗಳಲ್ಲಿ ಇಬ್ಬರೂ ಮೊದಲ ವಿವಾಹ ವಾರ್ಷಿಕೋತ್ಸವ ಆಚರಿಸುವವರಿದ್ದರು. ಇದರ ಮಧ್ಯೆಯೇ ರೇಣುಕಾಸ್ವಾಮಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಸಹನಾ ಈಗ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರಿಗೆ ರೇಣುಕಾಸ್ವಾಮಿ ಸಾವಿಗೀಡಾಗಿರುವ ವಿಚಾರವನ್ನು ಕುಟುಂಬಸ್ಥರು ಇನ್ನೂ ತಿಳಿಸಿಲ್ಲ.

Ad Widget . Ad Widget .

ಆದರೆ ಜೂನ್ 9ರಂದು ಸುಮನಹಳ್ಳಿಯ ಸತ್ವ ಅನುಗ್ರಹ ಅಪಾರ್ಟ್ಮೆಂಟ್ ಸಮೀಪದ ಮೋರಿಯಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿದೆ. ಶವ ಪತ್ತೆ ವೇಳೆ ಮುಖ,ತಲೆಗೆ ಹಾಗೂ ಕಿವಿಗೆ ಗಾಯವಾಗಿರುವು ಕಂಡು ಬಂದಿದೆ. ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಕೆಲವರನ್ನು ಬಂಧಿಸಿದ್ದರು. ಅವರು ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದು ತಪ್ಪೊಪ್ಪಿಕೊಂಡಿದ್ದರು.

ಪವಿತ್ರ ಗೌಡಗೆ ಮೆಸೇಜ್ ಹಾಕಿದ್ದಕ್ಕೆ ಕೊಲೆ ನಡಿತಾ..?

ಪವಿತ್ರಾಗೌಡ ಅವರಿಗೆ ರೇಣುಕಾಸ್ವಾಮಿ ಕೆಟ್ಟಾದಾಗಿ ಮೆಸೇಜ್ ಮಾಡಿದ್ದರು ಎನ್ನಲಾಗಿದೆ. ಅಶ್ಲೀಲ ಮೇಸೆಜ್, ಫೋಟೋ ಹಾಕಿ ಕಿರುಕುಳ ನೀಡಿದ್ದರು ಎನ್ನಲಾಗಿದೆ. ಈ ಕಾರಣಕ್ಕೆ ದರ್ಶನ್ ಹಾಗೂ ಇನ್ನೂ ಕೆಲವರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿ, ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ
ಕೊಲೆಯಾದ ರೇಣುಕಾಸ್ವಾಮಿ ದರ್ಶನ್ ಅಭಿಮಾನಿ ಆಗಿದ್ದನಂತೆ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ. ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾರೆಂದು ತಿಳಿದು ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ ಎನ್ನಲಾಗಿದೆ. ಆದರೆ ದರ್ಶನ್ ಈ ಕೃತ್ಯ ಮಾಡಿದ್ದಾರಾ.. ನಿಜನಾ ಸುಳ್ಳಾ ಎಂಬುದು ತನಿಖೆಯಿಂದ ತಿಳಿದು ಬರಬೇಕಷ್ಟೆ.

ಇನ್ನೂ ಪೋಲಿಸರು ದರ್ಶನ್ ವಿಚಾರಣೆ ನಡೆಸಿದಾಗ ನನಗೆ ಈ ವಿಷಯದ ಬಗ್ಗೆ ಏನು ಗೊತ್ತಿಲ್ಲ, ರೇಣುಕಾ ಸ್ವಾಮಿ ಯಾರು ಎಂಬುದೇ ತಿಳಿದಿಲ್ಲ ಎಂದು ದರ್ಶನ್ ಉತ್ತರಿಸಿದ್ದಾರೆ.

Leave a Comment

Your email address will not be published. Required fields are marked *