Ad Widget .

ಕೇರಳ ವಿಶ್ವವಿದ್ಯಾನಿಲಯದಲ್ಲಿ ಸನ್ನಿ ಲಿಯೋನ್ ಡ್ಯಾನ್ಸ್/ ವಿದ್ಯಾರ್ಥಿ ಸಂಘದ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಉಪಕುಲಪತಿ

ಸಮಗ್ರ ನ್ಯೂಸ್: ಕೇರಳ ವಿಶ್ವವಿದ್ಯಾನಿಲಯ ಕ್ಯಾಂಪಸ್‍ನ ಯೂನಿವರ್ಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘವು ಆಯೋಜಿಸಲು ಸಿದ್ಧತೆ ನಡೆಸಿದ್ದ ಬಾಲಿವುಡ್ ನಟಿ ಸನ್ನಿ ಲಿಯೋನ್ ನೃತ್ಯ ಕಾರ್ಯಕ್ರಮಕ್ಕೆ ಉಪಕುಲಪತಿ ಬ್ರೇಕ್ ಹಾಕಿದ್ದಾರೆ.

Ad Widget . Ad Widget .

ವಿಶ್ವವಿದ್ಯಾಲಯದ ಅನುಮತಿ ಪಡೆಯದೇ ಜುಲೈ5 ರಂದು ಸನ್ನಿ ಲಿಯೋನ್ ನೃತ್ಯ ಪ್ರದರ್ಶನ ನಡೆಸಲು ಸಿದ್ಧತೆಗಳು ನಡೆದಿದ್ದವು. ಕಾಲೇಜಿನಲ್ಲಿ ಯಾವುದೇ ಸಂದರ್ಭದಲ್ಲೂ ಇಂತಹ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಉಪಕುಲಪತಿ ಹೇಳಿದ್ದಾರೆ.

Ad Widget . Ad Widget .

ಈ ಹಿಂದೆ ವಿದ್ಯಾರ್ಥಿ ಸಂಘಟನೆಗಳು ಆಯೋಜಿಸಿದ್ದ ಕೆಲವು ಕಾರ್ಯಕ್ರಮಗಳಲ್ಲಿ ಅವಘಡ ಸಂಭವಿಸಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದರು. ಇದಾದ ಬಳಿಕ ಕ್ಯಾಂಪಸ್‍ನ ಹೊರಗೆ ಡಿಜೆ ಪಾರ್ಟಿಗಳು, ಸಂಗೀತ ರಾತ್ರಿ ಇತ್ಯಾದಿಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ನಿಷೇಧಿಸಿದೆ. ಈ ಆದೇಶದ ಹೊರತಾಗಿಯೂ, ಕೇರಳ ಎಂಜಿನಿಯರಿಂಗ್ ಕಾಲೇಜ್‍ನ ವಿದ್ಯಾರ್ಥಿ ಸಂಘವು ವಿಶ್ವವಿದ್ಯಾಲಯದ ಅನುಮತಿಯಿಲ್ಲದೆ ಸನ್ನಿ ಲಿಯೋನ್ ಅವರ ವೇದಿಕೆ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಿತ್ತು

Leave a Comment

Your email address will not be published. Required fields are marked *