Ad Widget .

ಎರಡು ಕ್ಷೇತ್ರಗಳಲ್ಲಿ ಗೆದ್ದಿರುವ ರಾಹುಲ್/ ವಯನಾಡಿಗೆ ರಾಜೀನಾಮೆ ನೀಡುವ ಸಾಧ್ಯತೆ

ಸಮಗ್ರ ನ್ಯೂಸ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡು ಮತ್ತು ರಾಯ್‍ಬರೇಲಿಯಲ್ಲಿ ಎರಡೂ ಲೋಕಸಭಾ ಕ್ಷೇತ್ರಗಳಲ್ಲೂ ಗೆದ್ದಿದ್ದು, ಕೇರಳದ ವಯನಾಡು ಕ್ಷೇತ್ರ ತೊರೆಯುವ ಸಾಧ್ಯತೆ ದಟ್ಟವಾಗಿದೆ.

Ad Widget . Ad Widget .

ತಮ್ಮನ್ನು ಗೆಲ್ಲಿಸಿದ ವಯನಾಡು ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಸಲುವಾಗಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್, ವಯನಾಡು ಜನತೆ ಮತ್ತೆ ನನ್ನ ಕೈ ಹಿಡಿದಿದ್ದು, ಎರಡನೇ ಬಾರಿ ನನ್ನನ್ನು ಆಯ್ಕೆ ಮಾಡಿದ್ದೀರಿ. ಎಲ್ಲರಿಗೂ ಧನ್ಯವಾದಗಳು. ನಾನು ಈಗ ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬುದು ತಿಳಿಯುತ್ತಿಲ್ಲ. ವಯನಾಡು, ರಾಯ್‍ಬರೇಲಿ ಯಾವುದಾದರೂ ಒಂದು ಕ್ಷೇತ್ರವನ್ನು ಉಳಿಸಿಕೊಳ್ಳಲು ನಾನು ನಿರ್ಧಾರ ತೆಗೆದುಕೊಂಡರೆ ಎರಡೂ ಕ್ಷೇತ್ರದ ಜನತೆ ನನ್ನ ನಿರ್ಧಾರವನ್ನು ಸಂತೋಷವಾಗಿ ಸ್ವೀಕರಿಸುತ್ತಾರೆ ಎಂದು ನಾನು ಭಾವುಸುತ್ತೇನೆ ಎಂದರು.

Ad Widget . Ad Widget .

ಆದರೆ ಇದೇ ಕಾರ್ಯಕ್ರಮದಲ್ಲಿ ಮಾತನಾಡಿದ ಕೇರಳ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಸುಧಾಕರನ್, ದೇಶ ಮುನ್ನಡೆಸಬೇಕಾದ ರಾಹುಲ್ ಗಾಂಧಿ ವಯನಾಡಲ್ಲೇ ಇರಬೇಕೆಂದು ನಾವು ಬಯಸುವುದು ಸರಿಯಲ್ಲ. ಈ ವಿಷಯದಲ್ಲಿ ನಾವು ದುಃಖ ಪಡಬಾರದು ಎನ್ನುವ ಮೂಲಕ ರಾಹುಲ್ ವಯನಾಡು ತೊರೆದು ಉತ್ತರಪ್ರದೇಶ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂಬ ಸುಳಿವು ನೀಡಿದ್ದಾರೆ

Leave a Comment

Your email address will not be published. Required fields are marked *