ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದರ್ಶನ್ ನನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದರ ಬೆನ್ನಲ್ಲೇ ಅವರ ಕುಟುಂಬಸ್ಥರು ಸಂಕಷ್ಟ ಪರಿಹಾರಕ್ಕೆ ದೇವರ ಮೊರೆ ಹೋಗಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗದಲ್ಲಿರುವ ದರ್ಶನ್ ಸಹೋದರಿ ದಿವ್ಯಾ ಅವರ ಪತಿ ಮಂಜುನಾಥ, ದರ್ಶನ್ ಒಳಿತಿಗಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೈಗಾದ ಟೌನ್‌ಶಿಪ್‌ನಲ್ಲಿರುವ ರಾಮಲಿಂಗೇಶ್ವರ, ಶನೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಹಾಗೂ ವಿಶೇಷ ಹೂವಿನ ಅಲಂಕಾರ ಪೂಜೆ ನೆರವೇರಿಸಿದ್ದಾರೆ. ದರ್ಶನ್ ಆದಷ್ಟು ಬೇಗ ಆರೋಪ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥಿಸಿಕೊಂಡಿದ್ದಾರೆ.




























