Ad Widget .

ಶಾಸಕ ಸ್ಥಾನಕ್ಕೆ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಇದೀಗ, ಸಂಸದರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ

Ad Widget . Ad Widget .

ಎಚ್.ಡಿ.ಕುಮಾರಸ್ವಾಮಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದರು. ಅಲ್ಲಿಂದ ನೇರವಾಗಿ ಬೆಂಗಳೂರಿಗೆ ಆಗಮಿಸಿದ ಅವರು. ವಿಧಾನಸೌಧಕ್ಕೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರ ತಮ್ಮ ಲೋಕಸಭಾ ಕ್ಷೇತ್ರ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಕುಮಾರಸ್ವಾಮಿ, ಸಂಸದರ ಕಚೇರಿ ಉದ್ಘಾಟಿಸಲಿದ್ದಾರೆ.

Ad Widget . Ad Widget .

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿ ಉದ್ಘಾಟನೆಗೆ ಬರುತ್ತಿರುವ ಕುಮಾರಸ್ವಾಮಿ ಸ್ವಾಗತಕ್ಕೆ ನಿಡಘಟ್ಟ ಗ್ರಾಮದಿಂದ ಮಂಡ್ಯವರೆಗೂ ತಯಾರಿ ಮಾಡಿಕೊಳ್ಳಲಾಗಿದೆ. ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಬಳಿ ಅದ್ಧೂರಿ ಸ್ವಾಗತ ದೊರೆಯಲಿದೆ.

Leave a Comment

Your email address will not be published. Required fields are marked *