Ad Widget .

ಕೊರಗಜ್ಜನ ಹೆಸರಲ್ಲಿ ವಂಚನೆ; ನಕಲಿ‌ ಖಾತೆ ಸೃಷ್ಟಿಸಿ ದೇಣಿಗೆ ಸಂಗ್ರಹ

ಸಮಗ್ರ ನ್ಯೂಸ್: ತುಳುನಾಡಿನ ಆರಾಧನ ದೈವ ಕೊರಗಜ್ಜ ಅಂದರೆ ಅಷ್ಟು ನಂಬಿಕೆ. ಏನೇ ಕಷ್ಟ ಬಂದರು ಅಜ್ಜನನ್ನು ನೆನೆದರೆ ಪರಿಹಾರವಾಗುತ್ತದೆ. ಆದ್ರೆ, ಇದೀಗ ಕೆಲ ವಂಚಕರು ಇದೇ ಕೊರಗಜ್ಜನ ಹೆಸರಿನಲ್ಲಿ ಭಕ್ತರನ್ನು ವಂಚನೆ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ಮೂಲಕ ‘ಡಿವೊಟೀಸ್ ಆಫ್ ಕುತ್ತಾರು ಕೊರಗಜ್ಜ’ ಎಂಬ ಖಾತೆ ತೆರದು ಅದರಲ್ಲಿ ಅನ್ನದಾನ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುತ್ತಿದ್ದಾರೆ.

Ad Widget . Ad Widget .

ಮಂಗಳೂರು ತಾಲೂಕಿನ ಆದಿಸ್ಥಳ ಕುತ್ತಾರು ಕೊರಗಜ್ಜ ಸನ್ನಿಧಾನ. ಇಲ್ಲಿನ ಫೋಟೋ ಮತ್ತು ಹೆಸರನ್ನು ಬಳಸಿಕೊಂಡು ದೈವಸ್ಥಾನದ ವೆಬ್ ಸೈಟ್ ಎಂದು ಬಿಂಬಿಸುವಂತೆ ಈ ನಕಲಿ‌ ಖಾತೆ ತೆರೆಯಲಾಗಿದೆ. ಕೊರಗಜ್ಜನ ಫೋಟೋ ಹಾಕಿ ನಾವು‌ ಕಷ್ಟದಲ್ಲಿದ್ದೇವೆ ಕೊರಗಜ್ಜನ ಭಕ್ತರು ಸಹಾಯ ಮಾಡುವಂತೆ ಕೇಳಿಕೊಳ್ಳಲಾಗಿದೆ. ಇದನ್ನು ನಂಬಿ‌ ಅನೇಕ ಭಕ್ತರು ದೇಣಿಗೆ ನೀಡಿದ್ದಾರೆ. ಈ ವಿಚಾರ ದೈವಸ್ಥಾನದ ಆಡಳಿತ ಮಂಡಳಿಯ ಗಮನಕ್ಕೆ ಬರುತ್ತಿದ್ದಂತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ

Ad Widget . Ad Widget .

ಇನ್ನೂ ದೈವಸ್ಥಾನದ ಆಡಳಿತ ಮಂಡಳಿಯು ಯಾವುದೇ ಉದ್ದೇಶಕ್ಕಾಗಿ ಆನ್‌ಲೈನ್ ಮುಖಾಂತರ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ ರೀತಿ ಆಡಳಿತ ಮಂಡಳಿಯ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಯಾವುದೇ ರೀತಿಯ ಪ್ರಕಟಣೆ ಬಂದಲ್ಲಿ ಅದಕ್ಕೆ ಭಕ್ತರು ಪ್ರತಿಕ್ರಿಯಿಸಬಾರದು ಎಂದು ಕ್ಷೇತ್ರದ ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ. ಕೊರಗಜ್ಜ ದೈವಕ್ಕೆ ಚಕ್ಕುಲಿ, ಎಲೆ-ಅಡಿಕೆ, ಮದ್ಯವೆ ನೈವೇದ್ಯ. ಇದನ್ನು ಹೊರತುಪಡಿಸಿ ಯಾವುದೇ ವೈಭವದ, ಆಡಂಬರದ ಸೇವೆಯನ್ನು ಕೊರಗಜ್ಜ ಬಯಸುವುದಿಲ್ಲ. ಕೊರಗಜ್ಜನ ಭಕ್ತರು ಕೇವಲ ಕರಾವಳಿ ಮಾತ್ರವಲ್ಲದೇ ಹೊರ ಜಿಲ್ಲೆ, ಹೊರ ರಾಜ್ಯದಲ್ಲೂ ಇದ್ದು ಇದನ್ನೆ ಬಂಡವಾಳ ಮಾಡಿಕೊಂಡಿರುವ ದುರುಳರು ವಂಚನೆಗೆ ಇಳಿದಿದ್ದಾರೆ.

Leave a Comment

Your email address will not be published. Required fields are marked *