Ad Widget .

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು|ಪ್ರಯಾಣಿಕರು ಅಪಾಯದಿಂದ ಪಾರು

ಸಮಗ್ರ ನ್ಯೂಸ್:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿಯ ಬೆಟ್ಟಗೇರಿ ಮುಖ್ಯರಸ್ತೆಯ ತಳೂರು ಜಂಕ್ಷನ್ ಬಳಿ ಭಾನುವಾರ(ಜೂ.16) ನಡೆದಿದೆ.

Ad Widget . Ad Widget .

ಭಾಗಮಂಡಲ ಕಡೆಯಿಂದ ಮಡಿಕೇರಿ ಕಡೆಗೆ ಟಿ. ನರಸೀಪುರದ ನಿವಾಸಿ ನಾಗೇಂದ್ರ ಎಂಬುವವರು ಚಲಾಯಿಸುತಿದ್ದ ಕಾರು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿಬಿದ್ದು ಅಪಘಾತ ಸಂಭವಿಸಿದೆ.

Ad Widget . Ad Widget .

ಅಪಘಾತದಿಂದ ಕಾರು ಜಖಂಗೊಂಡಿದ್ದು, ಕಾರಲ್ಲಿದ್ದ ನಾಗೇಂದ್ರ ಹಾಗೂ ಅವರ ಪತ್ನಿ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಅದೃಷ್ಟ ವಸಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Leave a Comment

Your email address will not be published. Required fields are marked *