Ad Widget .

ಜಮ್ಮು ಕಾಶ್ಮೀರದಲ್ಲಿ ಜಗತ್ತಿನ ಅತೀ ಎತ್ತರದ ರೈಲ್ವೆ ಸೇತುವೆ/ ಯಶಸ್ವಿಯಾದ ಪ್ರಾಯೋಗಿಕ ರೈಲು ಸಂಚಾರ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆಯಲ್ಲಿ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಹಳಿ ಸೇರಿದಂತೆ ಇತರ ತಾಂತ್ರಿಕ ಕೆಲಸಗಳನ್ನು ಪರಿಶೀಲನೆ ನಡೆಸಿದ್ದು, ಇದೇ ವೇಳೆ ಚೆನಾಬ್ ಸೇತುವೆ ಮೇಲೆ ನಡೆಸಿದ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ.

Ad Widget . Ad Widget .

ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ

Ad Widget . Ad Widget .

ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ಲನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ, ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ.

ಚೆನಾಬ್‌ನ ಮೇಲಿನ ವಿಶ್ವದ ಅತಿ ಎತ್ತರದ ರೈಲು ಸೇತುವೆ ಇದಾಗಿದ್ದು, ಪ್ಯಾರಿಸ್‌ನ ಐಕಾನಿಕ್ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿರುವ, ನದಿಪಾತ್ರದ ಮೇಲೆ 359 ಮೀಟರ್‌ಗಳಷ್ಟು ಎತ್ತರದಲ್ಲಿರುವ 1.3 ಕಿಮೀ ಉದ್ದದ ರೈಲು ಸೇತುವೆ. ಇನ್ನು ಉಧಮ್ ಪುರ- ಶ್ರೀನಗರ- ಬಾರಾಮುಲ್ಲಾ ರೈಲು ಸಂಪರ್ಕವನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದಾರೆ.

Leave a Comment

Your email address will not be published. Required fields are marked *