ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಮ್ಯಾನೇಜರ್ ಪೊಲೀಸರ ವಶ

ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಇದೀಗ ಮತ್ತೊಬ್ಬ ಆರೋಪಿ ಪೊಲೀಸರ ವಶವಾಗಿದ್ದಾನೆ. ಈಗಾಗಲೆ 16ಜನ ಅರೆಸ್ಟ್ ಆಗಿದ್ದಾರೆ. ಈ ಮಧ್ಯೆ ಕೊಲೆ ಕೇಸ್ ನಲ್ಲಿ ಮತ್ತೊಬ್ಬ ವ್ಯಕ್ತಿಯನ್ನ ತಡರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡ ಮ್ಯಾನೇಜರ್ ದೇವರಾಜ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ರಸ್ತೆಯಲ್ಲಿ ದೇವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ನಡೆದ ದಿನ ರೇಣುಕಾಸ್ವಾಮಿ ಕೊಲೆಯಾದ ಶೆಡ್‌ಗೆ ಪವಿತ್ರಾ ಜತೆಗೆ ದೇವರಾಜ್ ಕೂಡ ಹೋಗಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದೇವರಾಜ್‌ನನ್ನು ಪೊಲೀಸರು ವಶ ಪಡೆದುಕೊಂಡಿದ್ದಾರೆ.

Ad Widget ... ..

ಇತ್ತ ಪವಿತ್ರಾ ಗೌಡ ಮನೆಯಲ್ಲಿ ಇಂದು ಪೊಲೀಸರು ಮಹಜರು ನಡೆಸಲಿದ್ದಾರೆ. ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ ನಂತರ ಪವಿತ್ರಾಗೌಡ ನೇರವಾಗಿ ತಮ್ಮ ಮನೆಗೆ ಹೋಗಿದ್ದರು. ರೇಣುಕಾ ಸ್ವಾಮಿ ಮೇಲೆ ಮೊದಲು ಹಲ್ಲೆ ನಡೆಸಿದ್ದೇ ಪವಿತ್ರಾ ಗೌಡ ಎನ್ನಲಾಗಿದೆ. ಪವಿತ್ರಾಗೌಡ ನೋಡುತ್ತಿದ್ದಂತೆ ರೇಣುಕಾಸ್ವಾಮಿ ಪವಿತ್ರಾ ಕಾಲಿಗೆ ಬಿದ್ದು ತಪ್ಪಾಯ್ತು ಅಂತ ಕ್ಷಮೆ ಕೇಳಿದ್ದನಂತೆ. ಸದ್ಯ ಪವಿತ್ರಾ ಮನೆಯಲ್ಲಿ ಪೊಲೀಸರು ಆ ದಿನ ಪವಿತ್ರಾ ಧರಿಸಿದ್ದ ಬಟ್ಟೆ ಹಾಗೂ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದ ಚಪ್ಪಲಿಯನ್ನ ಸೀಜ್ ಮಾಡಲಿದ್ದಾರೆ. ಪ್ರಕರಣದಲ್ಲಿ ಪವಿತ್ರಾ ಚಪ್ಪಲಿ ಕೂಡ ಮಹತ್ವದ ಸಾಕ್ಷ್ಯವಾಗಲಿದೆ.

Ad Widget

Leave a Comment

Your email address will not be published. Required fields are marked *