ಸಮಗ್ರ ನ್ಯೂಸ್: ಕರ್ನಾಟಕ ಗ್ರಾಮೀಣ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ 586 ಆಫೀಸ್ ಅಸಿಸ್ಟೆಂಟ್, ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಜೂನ್ 27, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅಪ್ಲೈ ಮಾಡಬೇಕು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅಪ್ಲೈ ಮಾಡಿ.
ಯಾವ್ಯಾವ ಬ್ಯಾಂಕಿನಲ್ಲಿ ಎಷ್ಟೆಷ್ಟು ಹುದ್ದೆಗಳಿಗೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕ ಗ್ರಾಮೀಣ ಬ್ಯಾಂಕ್- 386
ಕರ್ನಾಟಕ ವಿಕಾಸ್ ಗ್ರಾಮೀಣ ಬ್ಯಾಂಕ್- 200
ಹುದ್ದೆಯಾಧಾರಿತ ಪೋಸ್ಟ್ಗಳ ಸಂಖ್ಯೆ:
ಆಫೀಸ್ ಅಸಿಸ್ಟೆಂಟ್-200
ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್)- 386
ವಿದ್ಯಾರ್ಹತೆ:
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಆಫೀಸ್ ಅಸಿಸ್ಟೆಂಟ್-18ರಿಂದ 28 ವರ್ಷ
ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್)- 18ರಿಂದ 30 ವರ್ಷ
ವಯೋಮಿತಿ:
ಆಫೀಸ್ ಅಸಿಸ್ಟೆಂಟ್-18ರಿಂದ 28 ವರ್ಷ
ಆಫೀಸರ್ ಸ್ಕೇಲ್-1(ಅಸಿಸ್ಟೆಂಟ್ ಮ್ಯಾನೇಜರ್)- 18ರಿಂದ 30 ವರ್ಷ
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು: 05 ವರ್ಷಗಳು
OBC (NCL) ಅಭ್ಯರ್ಥಿಗಳು: 03 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳು
ಉದ್ಯೋಗದ ಸ್ಥಳ:
ಕರ್ನಾಟಕ
ಅರ್ಜಿ ಶುಲ್ಕ:
ಆಫೀಸರ್ (ಸ್ಕೇಲ್ I) ಹುದ್ದೆಗಳಿಗೆ:
SC/ST/PwBD ಅಭ್ಯರ್ಥಿಗಳು: ರೂ.175/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.850/-
ಪಾವತಿ ವಿಧಾನ: ಆನ್‌ಲೈನ್
ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗಳಿಗೆ:
SC/ST/PwBD/ESM/DESM ಅಭ್ಯರ್ಥಿಗಳು: ರೂ.175/-
ಎಲ್ಲಾ ಇತರ ಅಭ್ಯರ್ಥಿಗಳು: ರೂ.850/-
ಪಾವತಿ ವಿಧಾನ: ಆನ್‌ಲೈನ್