Ad Widget .

ಸುಳ್ಯ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸ.ಹಿ.ಪ್ರಾ.ಶಾಲೆಯಲ್ಲಿ ಪರಿಸರ ದಿನಾಚರಣೆ

ಸಮಗ್ರ ನ್ಯೂಸ್: ಶಾಲಾ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಿಸಿದ ಸ್ಪರ್ಧೆ, ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ bc ಟ್ರಸ್ಟ್ ಸುಳ್ಯ ತಾಲೂಕು ಬೆಳ್ಳಾರೆ ವಲಯ ಪಾಲೇಪ್ಪಾಡಿ ಒಕ್ಕೂಟದ ವತಿಯಿಂದ ಐವರ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದಿನ ಶಾಲಾ ಮಕ್ಕಳಿಗೆ ಪರಿಸರದ ಬಗ್ಗೆ ಸ್ಪರ್ಧೆ ನಡೆಸಿ ಬಹುಮಾನ ವಿತರಣೆ ಮತ್ತು ಶಾಲೆಯಲ್ಲಿ ಗಿಡ ನಾಟಿ ಮಕ್ಕಳಿಗೆ ಗಿಡ
ವಿತರಣೆ ಕಾರ್ಯಕ್ರಮ ನಡೆಸಲಾಯಿತು.

Ad Widget . Ad Widget .

ಕಾರ್ಯಕ್ರಮದಲ್ಲಿ ತಾಲೂಕಿನ ಮಾನ್ಯ ಯೋಜನಾಧಿಕಾರಿ ಮಾಧವ ಗೌಡ ರವರು ಪ್ರಾಸ್ತವಿಕ ವಾಗಿಯೋಜನೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ನಿವೃತ್ತ ASI ಹಾಗೂ ತಾಲೂಕಿನ ಜನಜಾಗೃತಿ ವಲಯಧಕ್ಷರು ಭಾಸ್ಕರ್ ಅಡ್ಕಾರ್ ರವರು, ಪರಿಸರವನ್ನು ಹೇಗೆ ಸಂರಕ್ಷಣೆ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿದರು.

Ad Widget . Ad Widget .

ಕಾರ್ಯಕ್ರಮದ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಪರಿಸರದ ಬಗ್ಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿದ್ದು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಐವರ್ನಾಡು ಗ್ರಾಮ ಪಂಚಾಯತ್ ನ ಸದಸ್ಯ ಸುಂದರ ಲಿಂಗಂ ರವರು ಕಾರ್ಯಕ್ರಮದ ಬಗ್ಗೆ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಶಾಲಾ ಆವರಣದಲ್ಲಿ ಹಣ್ಣಿನ ಗಿಡವನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಲಾ ಮಕ್ಕಳಿಗೆ ಸಸಿ ವಿತರಣೆ ಮಾಡಲಾಯಿತು. ವೇದಿಕೆಯಲ್ಲಿ ತಾಲೂಕಿನ ಕೃಷಿ ಮೇಲ್ವಿಚಾರಕ ರಮೇಶ್, ವಲಯ ಅಧ್ಯಕ್ಷ ವೇದ ಹೆಚ್. ಶೆಟ್ಟಿ, ಶೌರ್ಯ-ವಿಪತ್ತು ಘಟಕ ಸಂಯೋಜಕ ರಮೇಶ್, ಶಾಲಾ ಎಸ್ ಡಿ ಎಂ ಸಿ ಸದಸ್ಯ ದಿನೇಶ್, ಶಾಲಾ ಶಿಕ್ಷಕಿ ಸರಸ್ವತಿ, ಶಾಲಾ ವಿದ್ಯಾರ್ಥಿ ನಾಯಕಿ ಶ್ವೇತಾ, ಪಾಲೇಪ್ಪಾಡಿ ಒಕ್ಕೂಟದ ಅಧ್ಯಕ್ಷ ರಾಮಚಂದ್ರ ಕಟ್ಟತಾರು, ಶಾಲಾ ಶಿಕ್ಷಕರು ವೃಂದ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಶೌರ್ಯ-ವಿಪತ್ತು ಘಟಕದ ಸದಸ್ಯರು, ವಲಯದ ಸೇವಾ ಪ್ರತಿನಿಧಿಗಳ ಯಶೋಧ, ಹರೀನಾಕ್ಷಿ, ಗೀತಾ, ಹರಿಣಿ ಕೆ. ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು. ಒಕ್ಕೂಟದ ಸದಸ್ಯರು ವಲಯ ಮೇಲ್ವಿಚಾರಕಿ ವಿಶಾಲ ಕೆ. ಕಾರ್ಯಕ್ರಮ ನಿರೂಪಿಸಿ, ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ವನಿತಾ ರವರು ಸ್ವಾಗತಿಸಿ, ಶಾಲಾ ಶಿಕ್ಷಕ ಅರವಿಂದರವರು ವಂದಿಸಿದರು.

Leave a Comment

Your email address will not be published. Required fields are marked *