Ad Widget .

ಮಧುರೈ-ಬೆಂಗಳೂರು ನಡುವೆ ವಂದೇ ಭಾರತ್/ ಪ್ರಾಯೋಗಿಕ ಸಂಚಾರ ಆರಂಭ

ಸಮಗ್ರ ನ್ಯೂಸ್:
ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.

Ad Widget . Ad Widget .

ಸೋಮವಾರ ಬೆಳಗ್ಗೆ 5.15ಕ್ಕೆ ಮಧುರೈ ನಿಲ್ದಾಣದಿಂದ ಹೊರಟು ಬೆಂಗಳೂರನ್ನು ಮಧ್ಯಾಹ್ನ 2 ಗಂಟೆ ಸುಮಾರಿಗೆ ತಲುಪಿ ಪುನಃ ತೆರಳಿತು. ಎರಡು ನಗರಗಳನ್ನು ಸರಿಸುಮಾರು 6 ಗಂಟೆಗಳಲ್ಲಿ ಕ್ರಮಿಸುವ ನಿರೀಕ್ಷೆಯಿದೆ.

Ad Widget . Ad Widget .

ರೈಲಿನ ವೇಗ, ನಿಲುಗಡೆ ನಿಲ್ದಾಣ ನಿಗದಿ ಬಳಿಕ ರೈಲಿನ ವೇಳಾಪಟ್ಟಿ, ದರವನ್ನು ಪ್ರಕಟಿಸಿ, ವಾಣಿಜ್ಯ ಸಂಚಾರದ ದಿನಾಂಕ ಘೋಷಣೆ ಮಾಡಲಾಗುತ್ತದೆ. ಪ್ರಾಥಮಿಕ ಮಾಹಿತಿಯಂತೆ ಈ ವಂದೇ ಭಾರತ್ ರೈಲು ದಿಂಡಿಗಲ್‌, ಕರೂರ್‌, ಸೇಲಂ, ಧರ್ಮಪುರಿ ಮತ್ತು ಹೊಸೂರು ನಿಲ್ದಾಣದಲ್ಲಿ ನಿಲುಗಡೆ ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದರು.

Leave a Comment

Your email address will not be published. Required fields are marked *