ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂಗಾರು ಮಳೆ ಕಳೆದ ಕೆಲ ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಕ್ಷೀಣಗೊಂಡಿತ್ತು, ಈಗ ಮತ್ತೆ ಮಾರುತಗಳು ಕರಾವಳಿ ಭಾಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಹಿನ್ನಲೆಯಲ್ಲಿ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಂದು ಮತ್ತೆ ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಬಿರುಗಾಳಿ 40 ರಿಂದ 50 ಕಿಲೋಮೀಟರ್ ಪ್ರತಿ ಗಂಟೆಯ ವೇಗದಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದೆ. ಅಲ್ಲಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತ ಸ್ಥಳೀಯ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಮತ್ತು 21 ಡಿಗ್ರಿ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.