Ad Widget .

ನಿಮ್ಮ ಕಾರಿಗೆ ಕಣ್ಣುಕುಕ್ಕುವ ಹೆಡ್ ಲೈಟ್ ಹಾಕ್ಸಿದೀರಾ? ಹಾಗಿದ್ರೆ ನಿಮ್ ಮೇಲೆ ಕೇಸ್ ಬೀಳೋದು ಪಕ್ಕಾ!!

ಸಮಗ್ರ ನ್ಯೂಸ್: ಕೇಂದ್ರ ಮೋಟಾರು ಕಾಯ್ದೆ(ಸಿಎಂವಿ)ಯಲ್ಲಿ ನಮೂದಿಸಿರುವ ಮಾನದಂಡದಂತೆ ವಾಹನ ಸವಾರರು ಹೆಡ್‌ಲೈಟ್ ಅಳವಡಿಕೆ ಮಾಡಿಕೊಳ್ಳಬೇಕು. ಕಾಯ್ದೆ ಉಲ್ಲಂಘಿಸಿದರೆ ಅಂತಹ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ) ಅಲೋಕ್‌ ಕುಮಾರ್‌ ಎಚ್ಚರಿಸಿದ್ದಾರೆ.

Ad Widget . Ad Widget .

ಇತ್ತೀಚಿನ ದಿನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ ದೀಪಗಳನ್ನು ಅಳವಡಿಸುತ್ತಿದ್ದು, ಇದರಿಂದ ಎದುರು ಮುಖದಲ್ಲಿ ಸಂಚರಿಸುವ ಇತರೆ ವಾಹನ ಸವಾರರಿಗೆ ತೀವ್ರ ತೊಂದರೆ ಆಗುತ್ತಿದೆ. ಭಾರಿ ಗಾತ್ರದ ವಾಹನಗಳಾದ ಟ್ರಕ್‌, ಬಸ್‌ಗಳಲ್ಲಿ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ತಮ್ಮ ವಾಹನಗಳಲ್ಲಿ
ಅಳವಡಿಸುವುದರಿಂದ ಇತರೆ ವಾಹನಗಳ ಸವಾರರಿಗೆ ತೊಂದರೆ ಆಗುತ್ತಿದೆ. ಅಪಘಾತ ಪ್ರಕರಣಗಳು ಸಂಭವಿಸುತ್ತಿವೆ ಎಂದು ಅವರು ಹೇಳಿದ್ದಾರೆ.

Ad Widget . Ad Widget .

ಆದ್ದರಿಂದ ಎಲ್ಲಾ ವಾಹನ ಸವಾರರು ತಮ್ಮ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆ ಯಲ್ಲಿ ನಮೂದಿಸಿರುವ ಮಾನದಂಡ ದಂತೆ ಅಳವಡಿಸಬೇಕಾಗಿರುವ ಹೆಡ್‌ ಲೈಟ್‌ಗಳನ್ನೇ ಅಳವಡಿಸಬೇಕಾಗಿರು ವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಸಿಎಂವಿ ಕಾಯ್ದೆಯಲ್ಲಿನ ನಿಯಮ ಗಳನ್ನು ಉಲ್ಲಂಘಿಸಿದಲ್ಲಿ ಕೇಸ್‌ ದಾಖಲಿಸ ಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಜತೆಗೆ ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾವಹಿಸಿ, ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪ ಅಳವಡಿಸಿರುವುದು ಕಂಡು ಬಂದರೆ ಜುಲೈನಲ್ಲಿ ಕ್ರಮಕೈಗೊಳ್ಳಲು ಅವರು ಆದೇಶದಲ್ಲಿ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *