Ad Widget .

ದರ್ಶನ್ ಹಿಂದೆ ರೌಡಿಗ್ಯಾಂಗ್| ತನಿಖೆ ವೇಳೆ ಪಾತಕಿಗಳ ನಂಟು ಬಯಲು

ಸಮಗ್ರ ನ್ಯೂಸ್: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ ಮತ್ತು ತಂಡದ ಸದಸ್ಯರ ಮೊಬೈಲ್ ಕರೆಗಳ ವಿವರ, ವಾಟ್ಸ್‌ ಆ್ಯಪ್‌ ಅನ್ನು ತಾಂತ್ರಿಕ ತಜ್ಞರು ಪರಿಶೀಲಿಸಿದ್ದು, ಬಂಧಿತ ಆರೋಪಿಗಳ ಪೈಕಿ ಕೆಲವರು ರೌಡಿಗಳ ಸಂಪರ್ಕದಲ್ಲಿ ಇದ್ದದ್ದು ಗೊತ್ತಾಗಿದೆ.

Ad Widget . Ad Widget .

‘ಬಂಧಿತ ಆರೋಪಿಗಳ ಆರು ತಿಂಗಳ ಮೊಬೈಲ್‌ ಕರೆಗಳ ವಿವರ ಪಡೆಯಲಾಗುತ್ತಿದೆ. ಬಂಧಿತರು ರೌಡಿಗಳ ಸಂಪರ್ಕದಲ್ಲಿ ಇರುವುದು ತನಿಖೆಯಿಂದ ಬಯಲಾಗುತ್ತಿದೆ. ಆರೋಪಿಗಳು ಯಾವ ಉದ್ದೇಶದಿಂದ ರೌಡಿಗಳೊಂದಿಗೆ ಸಂಪರ್ಕ ಹೊಂದಿದ್ದರು ಎಂಬುದನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಮೂಲಗಳು ಹೇಳಿವೆ.

Ad Widget . Ad Widget .

‘ದರ್ಶನ್‌ ಮ್ಯಾನೇಜರ್ ನಾಗರಾಜ್‌ ಅಲಿಯಾಸ್‌ ನಾಗ, ಕಾರು ಚಾಲಕ ಲಕ್ಷ್ಮಣ್‌ ಅವರ ಮೊಬೈಲ್‌ ಪರಿಶೀಲನೆ ನಡೆಸಲಾಗಿದೆ. ಈ ಇಬ್ಬರು ರೌಡಿಗಳೊಂದಿಗೆ ಚರ್ಚಿಸಿರುವ ಮಾಹಿತಿ ಲಭಿಸಿದೆ. ನಟ ಬೇರೆ ಬೇರೆ ಜಿಲ್ಲೆಗಳಿಗೆ ಸಿನಿಮಾ ಪ್ರಚಾರಕ್ಕೆ ತೆರಳಿದ್ದಾಗ ಆಯಾ ಭಾಗದಲ್ಲಿ ಅಭಿಮಾನಿಗಳನ್ನು ಸೇರಿಸಲು ರೌಡಿ ಚಟುವಟಿಕೆಗಳಲ್ಲಿ ಭಾಗಿ ಆದವರ ಜತೆಗೆ ಮಾತುಕತೆ ನಡೆಸಿರುವ ಸಾಧ್ಯತೆಯೂ ಇದೆ’ ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *