Ad Widget .

ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಅವಕಾಶವಿಲ್ಲ| ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ

ಸಮಗ್ರ ನ್ಯೂಸ್:ದಕ್ಷಿಣ ಭಾರತದ ಅತ್ಯಂತ ಪವಿತ್ರ ಧಾರ್ಮಿಕ ಕ್ಷೇತ್ರವಾದ ಕಾವೇರಿ ತ್ರಿವೇಣಿ ಸಂಗಮದಲ್ಲಿ ಜಲಕ್ರೀಡೆಗೆ ಯಾವ ಕಾರಣಕ್ಕೂ ಅವಕಾಶ ನೀಡಬೇಡಿ ಎಂದು ಪೋಲಿಸ್ ಇಲಾಖೆ ಮತ್ತು ಭಗಂಡೇಶ್ವರ ದೇವಾಲಯ ಸಿಬ್ಬಂದಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

Ad Widget . Ad Widget .

ಭಾಗಮಂಡಲ ಮೇಲ್ಸೇತುವೆ ವೀಕ್ಷಣೆಯ ಸಂಧರ್ಭದಲ್ಲಿ ಪ್ರವಾಸಿಗರು ತ್ರಿವೇಣಿ ಸಂಗಮದಲ್ಲಿ ಈಜಾಡುತ್ತಿದ್ದನ್ನು
ಕಂಡು ಗರಂ ಆಗಿ ಸಿಬ್ಬಂದಿ ವರ್ಗದವರನ್ನು ತರಾಟೆಗೆ ತೆಗೆದುಕೊಂಡರು.
ತ್ರಿವೇಣಿ ಸಂಗಮದಲ್ಲಿ ಜಲ ಕ್ರಿಡೆ ನಡೆಸುತ್ತಿದ್ದ ಪ್ರವಾಸಿಗರಿಗೆ ಕ್ಷೇತ್ರದ ಪಾವಿತ್ರ್ಯತೆ ಬಗ್ಗೆ ತಿಳಿಸಿ ಮನವರಿಕೆ ಮಾಡಿದರು.

Ad Widget . Ad Widget .

ತ್ರಿವೇಣಿ ಸಂಗಮದಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ಹೊರತು ಪಡಿಸಿ ಯಾವುದೇ ರೀತಿಯಲ್ಲಿ ಕಲುಷಿತ ವಾತಾವರಣ ನಿರ್ಮಾಣವಾಗದ ಹಾಗೆ
ಸಿಬ್ಬಂದಿಗಳು ಕಾವಲು ಕಾಯುವಂತೆ ನಿರ್ದೇಶನ ನೀಡಿದ ಪೊನ್ನಣ್ಣ ನವರು ಹೆಚ್ಚಿನ ಸಿಬ್ಬಂದಿ ಅವಶ್ಯಕತೆ ಇದ್ದರೆ ಒದಗಿಸುವುದಾಗಿ ತಿಳಿಸಿದರು. ಪ್ರವಾಸಿಗರಿಗೆ ಈ ನಿಟ್ಟಿನಲ್ಲಿ ಮಾಹಿತಿ ನೀಡಲು ತಿಳುವಳಿಕೆ ಫಲಕ ಅಳವಡಿಸುವಂತೆ ಪೋಲಿಸ್ ಸಬ್ ಇನ್ಸ್‌ಪೆಕ್ಟರ್ ಬಿ.ಎಲ್. ಶೋಭಾ ರವರಿಗೆ ಸೂಚನೆ ನೀಡಿದರು.

ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಪೊನ್ನಣ್ಣ ಭಾಗಮಂಡಲ ಮತ್ತು ತಲಕಾವೇರಿ ಪೌರಾಣಿಕ ಹಿನ್ನಲೆ ಉಳ್ಳ ಪುಣ್ಯ ಕ್ಷೇತ್ರವಾಗಿದ್ದು ಇಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ವಿರುದ್ದವಾಗಿ ಯಾವುದೇ ನಡವಳಿಕೆಗಳನ್ನು ಸಹಿಸಲು ಸಾಧ್ಯವಿಲ್ಲ.
ಮಾಹಿತಿ ಕೊರತೆಯಿಂದ
ಕೆಲ ಪ್ರವಾಸಿಗರಿಂದ ಅಪಚಾರವಾಗುತ್ತಿರುವ
ವಿವರಗಳು ತಮ್ಮ ಗಮನಕ್ಕೆ ಬಂದಿದ್ದು ಇದರ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ತಾವು ಬದ್ದರಿದ್ದೇವೆ ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ಮುಖಂಡ ತೆನ್ನಿರ ಮೈನಾ, ರಮಾನಾಥ್, ಸೂರಜ್ ಹೊಸೂರು, ಸುನಿಲ್ ಪತ್ರಾವೋ, ನೆರವಂಡ ಉಮೇಶ್, ದಂಬೆಕೋಡಿ ನಿಶ್ಚಲ್, ದೇವಂಗೋಡಿ ಹರ್ಷ, ಕುದುಪಜೆ ಪ್ರಕಾಶ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Leave a Comment

Your email address will not be published. Required fields are marked *